ಕಾರ್ಕಳ

ಕಾರ್ಕಳ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ಆಯ್ಕೆ ಅನಧಿಕೃತ: ದಲಿತ ಸಂಘಟನೆ ಮುಖಂಡರ ಆಕ್ಷೇಪ

ಕಾರ್ಕಳ: ಕಾರ್ಕಳದ ಕಾಬೆಟ್ಟಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಬೇಡ್ಕರ್ ಭವನದ ನಿರ್ವಹಣಾ ಸಮಿತಿಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮೂವರು ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದು ಇದು ನಿಯಮಬಾಹಿರವಾಗಿದ್ದು, ಅವರ ಸದಸ್ಯತ್ವವನ್ನು ರದ್ದುಪಡಿಸಬೇಕು ಎಂದು ದಲಿತ ಮುಖಂಡರು ಆಗ್ರಹಿಸಿದ್ದಾರೆ.

ಕಾರ್ಕಳ ಪತ್ರಿಕಾ ಭವನದಲ್ಲಿ ಈ ಕುರಿತು ಸುದ್ಧಿಗೋಷ್ಟಿ ನಡೆಸಿದ ಮಾತನಾಡಿದ ದಲಿತ ಮುಖಂಡ ಗೋವರ್ಧನ ಅವರು, ಈ ಹಿಂದೆ ಜೂ. 4 ರಂದು ಅಂಬೇಡ್ಕರ್ ಭವನದ ನಿರ್ವಹಣಾ ಸಮಿತಿಗೆ ಸದಸ್ಯರ ಆಯ್ಕೆ ಕುರಿತು ಪೂರ್ವಭಾವಿ ಸಭೆಯನ್ನು ತಹಶಿಲ್ದಾರ್ ಕಚೇರಿಯಲ್ಲಿ ಕರೆಯಲಾಗಿತ್ತು.ಈ ಸಭೆಗೆ ಎಲ್ಲಾ ದಲಿತ ಸಂಘಟನೆಗಳು ಮುಖಂಡರಿಗೂ ಅಧಿಕೃತವಾಗಿ ಆಹ್ವಾನಿಸಲಾಗಿತ್ತು.ಆದರೆ ಏಕಾಎಕಿ ಜೂ.4 ರ ಸಭೆ ರದ್ದಾಗಿದ್ದು ಮುಂದಿನ ದಿನಾಂಕ ತಿಳಿಸುವುದಾಗಿ ಜೂ. 3 ರಂದು ಸಮಾಜ ಕಲ್ಯಾಣ ಇಲಾಖೆ ಕಚೇರಿಯಿಂದ ಕರೆ ಬಂದಿತ್ತು. ಈ ಸಭೆ ರದ್ದಾದ ಬಳಿಕ ಮತ್ತೆ ಸಭೆ ನಡೆಸದೇ ಮೂವರು ಸದಸ್ಯರನ್ನು ಅನಧಿಕೃತವಾಗಿ ನಾಮನಿರ್ದೇಶನ ಮಾಡಿರುವುದಕ್ಕೆ ಆಕ್ಷೇಪಣೆ ಇದೆ ಎಂದು ಗೋವರ್ಧನ ತಿಳಿಸಿದರು.

ರದ್ದಾದ ಪೂರ್ವಭಾವಿ ಸಭೆ ಮತ್ತೆ ನಡೆಸದೇ ಅಧಿಕಾರಿಗಳು ನಮ್ಮ ಗಮನಕ್ಕೆ ತರದೇ ಏಕಪಕ್ಷೀಯವಾಗಿ ಸದಸ್ಯರನ್ನು ನಾಮನಿರ್ದೇಶನ ಮಾಡಿರುವುದು ಸರಿಯಲ್ಲ, ಅದ್ದರಿಂದ ಜಿಲ್ಲಾಧಿಕಾರಿಗಳು ಮೂವರು ನಾಮನಿರ್ದೇಶಿತ ಸದಸ್ಯರನ್ನು ವಜಾಗೊಳಿಸಿ ಮತ್ತೆ ಸಭೆ ನಡೆಸಿ ಹೊಸದಾಗಿ ಸದಸ್ಯರ ನಾಮನಿರ್ದೇಶನ ಮಾಡುವಂತೆ ಗೋವರ್ಧನ ಅವರು ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ದಲಿತ ಮುಖಂಡರಾದ ಸುಧಾಕರ ದಾನಶಾಲೆ, ಹರೀಶ್ ಬಜಗೋಳಿ,ಸುನೀತಾ ಅಂಡಾರು ಉಪಸ್ಥಿತರಿದ್ದರು.

Related posts

ಭಾಂದವ ಕಪ್2026: ಕ್ರೈಸ್ಟ್‌ಕಿಂಗ್ ಶಾಲೆಯ ಬಾಲಕಿಯರ ವಾಲಿಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Madhyama Bimba

ಬಸ್ರಿ ಶಾಲೆಯಲ್ಲಿ ‘ಒಂದು ಗಿಡ ಹೆತ್ತವರೊಂದಿಗೆ’ ವೈಶಿಷ್ಟ್ಯಪೂರ್ಣ ಕಾರ್ಯಕ್ರಮ

Madhyama Bimba

ಹೆಬ್ರಿ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More