ಕಾರ್ಕಳಹೆಬ್ರಿ

ಮುದ್ರಾಡಿಯಲ್ಲಿ ಮಾದಕ ವ್ಯಸನ ಜಾಗೃತಿ ಕಾರ್ಯಾಗಾರ

ಹೆಬ್ರಿ: ಮಾದಕ ದ್ರವ್ಯ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರವಿದ್ದು ಸೈಬರ್ ಕ್ರೈಂ ಬಗ್ಗೆ ಎಚ್ಚರಿಕೆಯಿಂದಿರಿ. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ. ನಿಮ್ಮ ಭವಿಷ್ಯಕ್ಕೆ ಮಾರಕವಾಗುವ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಜ್ಞಾನ ಸಂಪಾದನೆಗೆ ನಿಮ್ಮ ಸಮಯವನ್ನು ಮೀಸಲಿಟ್ಟು ಉನ್ನತ ಸ್ಥಾನಮಾನವನ್ನು ನಿಮ್ಮದಾಗಿಸಿಕೊಳ್ಳಿ ಎಂದು ಹೆಬ್ರಿ ಆರಕ್ಷಕ ಠಾಣೆಯ ಉಪ ಠಾಣಾಧಿಕಾರಿ ಚಂದ್ರ ಎ. ಕೆ. ಹೇಳಿದರು.


ಅವರು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಮಾದಕ ವಸ್ತುಗಳ ಸೇವನೆಯ ವಿರುದ್ಧ ನಡೆದ ಜಾಗೃತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ತಂಬಾಕು ರಹಿತ ದಿನದ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

ವಿದ್ಯಾರ್ಥಿ ನಾಯಕ ಪ್ರತೀಕ್ ಅನಿಸಿಕೆ ವ್ಯಕ್ತಪಡಿಸಿದರು. ಶಾಲೆಯ ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಶಿಕ್ಷಕ ಪಿ. ವಿ. ಆನಂದ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿ, ಮಹೇಶ್ ನಾಯ್ಕ್ ವಂದಿಸಿದರು.

ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಶಿರ್ಲಾಲು ನಾರಾಯಣ ಗುರು ಸಂಘದಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆ

Madhyama Bimba

ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆ

Madhyama Bimba

ಹೆಬ್ರಿ: ಮುಖ್ಯಮಂತ್ರಿಗಳ ಹೆಬ್ರಿ ಭೇಟಿ ಹಿನ್ನೆಲೆಯಲ್ಲಿ ವಿಶೇಷ ಗ್ರಾಮ ಸಭೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More