ಕಾರ್ಕಳ

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿಯಾಗಬೇಕು: ಜಿಲ್ಲಾ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಸಂತೋಷ್

ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಹಾಗೂ ಇಂಟರ್ಯಾಕ್ಟ್ ಕ್ಲಬ್ ಇವರ ಸಹಕಾರದೊಂದಿಗೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು.

ಉಡುಪಿ ಜಿಲ್ಲಾ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸಂತೋಷ್ ಅವರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನವನ್ನು ಬೋಧಿಸಿ ಮಾದಕ ದ್ರವ್ಯಗಳ ಬಗ್ಗೆ ಮಾಹಿತಿ ನೀಡಿದರು.

ಇಂದಿನ ಕಾರ್ಯಕ್ರಮ ಯುವ ಜನತೆಯಲ್ಲಿ ಮಾದಕ ವ್ಯಸನಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಕಾನೂನಿನ ಅರಿವನ್ನು ಬೆಳೆಸುವ ಮಹತ್ವದ ಉದ್ದೇಶವನ್ನು ಹೊಂದಿದೆ. ಮಾದಕ ವಸ್ತುಗಳಿಗೆ ಬಲಿಯಾಗುವುದು ಎಷ್ಟು ಹಾನಿಕಾರವೊ ಅವರ ಸಂಪರ್ಕದಲ್ಲಿರುವುದು ಕೂಡ ಅಷ್ಟೇ ಹಾನಿಕಾರಕ ವಾಗಿದೆ. ಆದ್ದರಿಂದ ವ್ಯಸನಗಳಿಂದ ದೂರವಿರಿ. ಜೀವನವನ್ನು ಪ್ರೀತಿಸಿ. ಕಾನೂನನ್ನು ಗೌರವಿಸಿ. ಉತ್ತಮ ಪ್ರಜೆಗಳಾಗಿ ಜೀವಿಸಿ. ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಎಂದರು.

ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ ಶೆಟ್ಟಿ ಕೆ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಯೋಗೇಂದ್ರ ನಾಯಕ್, ಇಂಟರ್ಯಾಕ್ಟ್ ಕ್ಲಬ್‌ನ ಅಧ್ಯಕ್ಷೆ ಕುಮಾರಿ ವಿಶ್ವರಿ ಉಪಸ್ಥಿತರಿದ್ದರು.

ಇಂಟರ್ಯಾಕ್ಟ್ ಕ್ಲಬ್ಬಿನ ಕಾರ್ಯದರ್ಶಿ ಕುಮಾರಿ ಅರ್ಪಿತ ವಂದಿಸಿದರು. ಇಂಟರ್ಯಾಕ್ಟ್ ಕ್ಲಬ್ಬಿನ ಸಂಯೋಜಕರಾದ ದೇವದಾಸ್ ಕೆರೆಮನೆ ಸ್ವಾಗತಿಸಿ ನಿರೂಪಿಸಿದರು.

Related posts

ಜೂ. 6 ರಂದು ನೇರ ಸಂದರ್ಶನ

Madhyama Bimba

ಜೇಸಿ ಇಂಟರ್ನ್ಯಾಷನಲ್ ಆಂಗ್ಲಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಶ್ರೀಮತಿ ಮಮತ ಕೆ.

Madhyama Bimba

ಆಟೋರಿಕ್ಷಾ-ಬೈಕ್ ಅಪಘಾತ: ಗಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More