ಕಾರ್ಕಳ: ಮಾನಸಿಕ ಕಾಯಿಲೆಯಿಂದ ಮನನೊಂದು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 27ರಂದು ನಡೆದಿದೆ.
ಪೆರ್ವಾಜೆ ನಿವಾಸಿ ಸುಂದರ ಮೊಯಿಲಿ (75) ಆತ್ಮಹತ್ಯೆ ಮಾಡಿಕೊಂಡವರು.
ಇವರು ಸುಮಾರು 20 ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿಸುತ್ತಿದ್ದರೂ ಕಾಯಿಲೆ ಗುಣಮುಖವಾಗಿರುವುದಿಲ್ಲ. ಈ ವಿಷಯವಾಗಿ ಮನನೊಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
