ಮೂಡುಬಿದಿರೆ

ಗಾಳಿ-ಮಳೆಗೆ ಮನೆ ಹಾನಿ

ಪತ್ರಕರ್ತ ಜಗದೀಶ್ ಪೂಜಾರಿ ಅವರ ಮನೆಯ ಮೇಲೆ ಸೋಮವಾರ ರಾತ್ರಿ ಸುರಿದ ಭಾರಿ ಗಾಳಿ-ಮಳೆಗೆ ಮರವೊಂದು ಬಿದ್ದು ಮನೆಯು ಭಾಗಶಃ ಹಾನಿಗೊಳಗಾಗಿದೆ.

ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲಿನಲ್ಲಿ ಈ ಘಟನೆ ನಡೆದಿದೆ.

ರಾತ್ರಿ ಸುರಿದ ಗಾಳಿ-ಮಳೆಯ ತೀವ್ರತೆಗೆ ಮನೆಯ ಸಮೀಪದಲ್ಲಿದ್ದ ಮರವೊಂದು ಉರುಳಿ ಮನೆಯ ಮೇಲ್ಛಾವಣಿಗೆ ಬಿದ್ದ ಪರಿಣಾಮ ಮನೆಯ ಒಂದು ಭಾಗಕ್ಕೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಗ್ರಾಮ ಆಡಳಿತ ಅಧಿಕಾರಿ ಶ್ರೀನಿವಾಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Related posts

.   ಕಲ್ಲಮುಂಡ್ಕೂರು ಸಹಕಾರಿ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ

Madhyama Bimba

ಯುವರಾಜ ಜೈನ ಅವರಿಗೆ ಸಿರಿಪುರ ಪ್ರಶಸ್ತಿ

Madhyama Bimba

ಮೂಡಬಿದಿರೆಯಲ್ಲಿ ನೋಟರಿ ವಕೀಲರಾದ ಸುರೇಶ್ ಕೆ. ಪೂಜಾರಿಯವರ ಕಚೇರಿ ಸ್ಥಳಾಂತರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More