ಯುವಜನತೆಯು ಮಾದಕ ವಸ್ತುಗಳಿಗೆ ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದು ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸುವ ಸಲುವಾಗಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಕಾರ್ಕಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಾರ್ಕಳ ನಗರ ವಲಯ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ(ರಿ.), ಕಾರ್ಕಳ ತಾಲೂಕು ಹಾಗೂ ಕಾರ್ಕಳ ನಗರ ಆರಕ್ಷಕ ಠಾಣೆ ಮತ್ತು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಕಾರ್ಕಳದ ಜಂಟಿ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಮಾದಕ ವಸ್ತು ವಿರೋಧಿ ದಿನ ಹಾಗೂ ನಶಾ ಮುಕ್ತ ಭಾರತ ಎಂಬ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಕಳ ನಗರ ವಲಯದ ಪೊಲೀಸ್ ಉಪನಿರೀಕ್ಷಕರಾದ ಶಿವಕುಮಾರ್ ಎಸ್ ಆರ್. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಬದುಕಿನ ಅದಃಪತನಕ್ಕೆ ಕಾರಣವಾಗುತ್ತದೆ. ಯುವ ಜನತೆ ದೇಶಕ್ಕೆ ಶಕ್ತಿಯಾಗಿ ಪೂರಕವಾಗಬೇಕೇ ವಿನಹ ಮಾರಕವಾಗಬಾರದು ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವವರ ವಿರುದ್ಧ ಕಾನೂನಾತ್ಮಕವಾಗಿ ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತದೆ. ಸಮಾಜದಲ್ಲಿ ಇಂತಹ ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಭಯಭೀತಿ ಇಲ್ಲದೆ ಮುಕ್ತವಾಗಿ ಪೊಲೀಸ್ ಇಲಾಖೆಗೆ ಮಾಹಿತಿಯನ್ನು ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕ್ರಿಯೇಟಿವ್ ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು, ಬದುಕು ಅತ್ಯಂತ ಅಮೂಲ್ಯವಾದದು ದುಶ್ಚಟಗಳಿಗೆ ದಾಸರಾಗದೆ ಆ ಬದುಕನ್ನು ನಡೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಬೇಕು ಈ ನಿಟ್ಟಿನಲ್ಲಿ ಬದುಕನ್ನು ಹಸನಾಗಿಸಬೇಕು ಎಂದು ಅಧ್ಯಕ್ಷೀಯ ನುಡಿಗಳನ್ನಾಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ. ಗಣನಾಥ್ ಶೆಟ್ಟಿ ಬಿ, ಡಿವೈಎಸ್ಪಿ ವಿಜಯಕುಮಾರ್ ವೃಷಭರಾಜ್ ಜೈನ್, ಬಾಲಕೃಷ್ಣ ಹಿರಿಂಜ, ವಾಸು ಶೆಟ್ಟಿ, ಕರುಣಾಕರ್ ಕಡಂಬ, ಸುಭಾಷ್ ಪೂಜಾರಿ, ಶ್ರೀಮತಿ ಗೀತಾ ಹೆಗ್ಡೆ, ಕು. ಸುಜಯ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಉಪನ್ಯಾಸಕ ಲಕ್ಷ್ಮಿಕಾಂತ್ ನಡೆಸಿಕೊಟ್ಟರು. ಶ್ರೀಮತಿ ಗೀತಾ ಧನ್ಯವಾದವನ್ನಿತ್ತರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳದ ವತಿಯಿಂದ ದುಶ್ಚಟಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಆನ್ಲೈನ್ ಜನಜಾಗೃತಿ ಕಾರ್ಯಕ್ರಮ ನಡೆಯಿತು.
