ಮೂಡುಬಿದಿರೆ ಪ್ರೆಸ್‌ಕ್ಲಬ್ ಮತ್ತು ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಜು. 01 ಪತ್ರಿಕಾ ದಿನಾಚರಣೆಯಂದು ಮಾಧ್ಯಮ ಹಬ್ಬ 2026 ಮೂಡುಬಿದಿರೆ ಸಮಾಜ ಮಂದಿರದಲ್ಲಿ ಪ್ರೆಸ್‌ಕ್ಲಬ್ ಅಧ್ಯಕ್ಷ ಬಿ. ಸೀತಾರಾಮ್ ಆಚಾರ್ಯ ಅಧ್ಯಕ್ಷತೆಯಲ್ಲಿ ಜರಗಿತು.

ಸಮಾಜ ಮಂದಿರ ಸಭಾದ ಅಧ್ಯಕ್ಷ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾಧ್ಯಮಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಸುಸ್ಥಿರ ಸಮಾಜದ ನಿರ್ಮಾಣಕ್ಕೆ ಅಡಿಪಾಯವಾಗುತ್ತದೆ ಎಂದು ಹೇಳಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಜಿಲ್ಲೆಯಲ್ಲಿ ಉತ್ತಮ ಸಂಘಟನೆಯೊಂದಿಗೆ ಪ್ರಾಮಾಣಿಕ ಸಮಾಜದ ನಿರ್ಮಾಣಕ್ಕೆ ಕಾರಣವಾಗುವ ಪತ್ರಿಕಾ ವಲಯವನ್ನು ಕಾಣಬಹುದಾಗಿದೆ ಎಂದು ಹೇಳಿದರು.

ಟಿವಿ9 ಮಡಿಕೇರಿ ವಿಭಾಗದ ವಿಡೀಯೋ ಪತ್ರಕರ್ತ ನವೀನ್ ಸುವರ್ಣರನ್ನು ಪ್ರೆಸ್‌ಕ್ಲಬ್ ಗೌರವ ನೀಡಿ ಅಭಿನಂದಿಸಲಾಯಿತು.
ಎಸ್‌ಎಸ್‌ಎಲ್‌ಸಿ, ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ಅಮೋಘ್ ಹೆಗ್ಡೆ ಮತ್ತು ಸನ್ಮತ್ ಆಚಾರ್ಯರನ್ನು ಗೌರವಿಸಲಾಯಿತು.
ವಿಶ್ರಾಂತ ಪತ್ರಕರ್ತ ಸದಾನಂದ ಹೆಗಡೆಕಟ್ಟೆ ಪ್ರಾಯೋಜಿತ ದತ್ತಿನಿಧಿ ಉಪನ್ಯಾಸವನ್ನು ಮಂಗಳೂರಿನ ಫೊರೇನ್ಸಿಕ್ ಇನ್‌ವೆಸ್ಟಿಗೇಟರ್ ಶ್ರವಣ್ ಕುಮಾರ್ ಯು.ಕೆ. ನೆರವೇರಿಸಿದರು. ಸೈಬರ್ ಹಾಗೂ ಎಐ ತಂತ್ರಜ್ಞಾನದ ಮೂಲಕ ಪತ್ರಕರ್ತರು ಉನ್ನತೀಕರಿಸಿಕೊಳ್ಳುವ ರೀತಿಯನ್ನು ತಿಳಿಸಿದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನವೀನ್ ಸಾಲ್ಯಾನ್, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸುದರ್ಶನ ಎಂ. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು.
ಪ್ರೆಸ್‌ಕ್ಲಬ್ ಕಾರ್ಯದರ್ಶಿ ಪ್ರೇಮಶ್ರೀ ಕಲ್ಲಬೆಟ್ಟು ಪ್ರಾರ್ಥನೆಗೈದರು. ನವೀನ್ ಸಾಲ್ಯಾನ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಪ್ರೆಸ್‌ಕ್ಲಬ್ ಕೋಶಾಧಿಕಾರಿ ಪ್ರಸನ್ನ ಹೆಗ್ಡೆ ಸನ್ಮಾನ ಪತ್ರ ವಾಚಿಸಿದರು. ಉಪಾಧ್ಯಕ್ಷ ಹರೀಶ್ ಕೆ. ಆದೂರು ಧನ್ಯವಾದವಿತ್ತರು. ಅಶ್ರಫ್ ವಾಲ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಕಾರ್ಯದರ್ಶಿ ಜೈಸನ್ ತಾಕೋಡೆ, ಕೋಶಾಧಿಕಾರಿ ರಾಘವೇಂದ್ರ ಶೆಟ್ಟಿ, ಸದಸ್ಯರಾದ ಯಶೋಧರ ಬಂಗೇರ, ಶರತ್ ದೇವಾಡಿಗ, ಪುನೀತ್, ಪ್ರೆಸ್‌ಕ್ಲಬ್‌ನ ಪ್ರಸನ್ನ ಸಚ್ಚರಿಪೇಟೆ ಸಹಕರಿಸಿದರು.
