ಮೂಡುಬಿದಿರೆ

ಮಹಾವೀರ ಕಾಲೇಜಿನಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಬಗ್ಗೆ ಮಾಹಿತಿ

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮದ ಅಂಗವಾಗಿ ನಮ್ಮ ಸಹ ಸಂಸ್ಥೆಯಾದ ಎ.ಜಿ. ಸೋನ್ಸ್ ಐ.ಟಿ.ಐ. ಯ ಹಿರಿಯ ಉಪನ್ಯಾಸಕರಾದ ಶಿವಪ್ರಸಾದ ಹೆಗ್ಡೆಯವರು “ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ” ಬಗ್ಗೆ ಮಾಹಿತಿ ನೀಡಿದರು.


ರಸ್ತೆ ಅಪಘಾತಗಳು ದಿನೇ ದಿನೇ ಹೆಚ್ಚುತ್ತಿರುವ ಈ ಕಾಲದಲ್ಲಿ ಪ್ರತಿಯೊಬ್ಬರು ಸಂಚಾರ ನಿಯಮಗಳನ್ನು ಪಾಲಿಸಬೇಕು. ಅಪಘಾತಗಳಾಗದಂತೆ ಯಾವ ರೀತಿ ಮುಂಜಾಗೃತೆ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂಬುದರ ಬಗ್ಗೆ ಕೆಲವಷ್ಟು ನೈಜ ಘಟನೆಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ವಹಿಸಿದ್ದರು.

ಕಾರ್ಯಕ್ರಮ ಸಂಯೋಜಕಿ ದೀಕ್ಷಾ ಉಪಸ್ಥಿತರಿದ್ದರು. ಉಪನ್ಯಾಸಕಿ ಪದ್ಮಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮೂಡುಬಿದಿರೆ ಆಡಳಿತ ಸೌಧದಲ್ಲಿ ಚಲನೆಯಿಲ್ಲದ ಲಿಫ್ಟ್?

Madhyama Bimba

ಶಿರ್ತಾಡಿಯಲ್ಲಿ ಗುರು ನಾರಾಯಣ ಸ್ವಾಮಿ ಸಂಘ ಸದಸ್ಯರ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Madhyama Bimba

ಮೂಡುಬಿದಿರೆ ದಲಿತ ಕುಂದು ಕೊರತೆ ಸಭೆಯಲ್ಲಿ ಇಲಾಖಾಧಿಕಾರಿಗಳೇ ಗೈರು!

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More