ಕಾರ್ಕಳ

ಕಾರ್ಕಳ ಜ್ಞಾನಸುಧಾ: ಹದಿಹರೆಯದ ಬಗ್ಗೆ ಜಾಗೃತಿ ಕಾರ್ಯಕ್ರಮ

ರಾಷ್ಟ್ರೀಯ ವೈದ್ಯರ ದಿನದ ಪ್ರಯುಕ್ತ ಆರೋಗ್ಯಕರ ಹದಿಹರೆಯಕ್ಕಾಗಿ ಜಾಗೃತಿ ಕಾರ್ಯಕ್ರಮವನ್ನು ಕಾರ್ಕಳ ಜ್ಞಾನಸುಧಾಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಲಾಯಿತು.


ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಕ್ಕುಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಶ್ರೀವಿದ್ಯಾ ಮಾತನಾಡಿ ಕಿಶೋರಾವಸ್ಥೆಯು ಜೀವನದ ಮಹತ್ವದ ಹಂತವಾಗಿದ್ದು, ಈ ಅವಧಿಯಲ್ಲಿ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಬದಲಾವಣೆಗಳ ಬಗ್ಗೆ ಸರಿಯಾದ ಅರಿವು ಹೊಂದುವುದು ಅಗತ್ಯ ಎಂದು ತಿಳಿಸಿದರು. ಕಿಶೋರಾವಸ್ಥೆಯಲ್ಲಿ ಉಂಟಾಗುವ ದೈಹಿಕ ಬೆಳವಣಿಗೆ, ವೈಯಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ, ಮಾನಸಿಕ ಆರೋಗ್ಯ, ಉತ್ತಮ ಅಭ್ಯಾಸಗಳು, ಸುರಕ್ಷತೆ ಹಾಗೂ ಆತ್ಮವಿಶ್ವಾಸದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ವಿವರವಾದ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ತಮ್ಮ ಸಂದೇಹಗಳನ್ನು ಕೇಳಿ ಸೂಕ್ತ ಮಾರ್ಗದರ್ಶನ ಪಡೆದುಕೊಂಡರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಜೀವನಶೈಲಿ, ಸ್ವಯಂಅರಿವು ಮೂಡಿಸುವಲ್ಲಿ ಯಶಸ್ವಿಯಾಯಿತು.

ಕಾರ್ಯಕ್ರಮದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ವಾಣಿ.ಕೆ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕುಮಾರಿ ಪೂರ್ವಿ ಪ್ರಾರ್ಥಿಸಿ, ಶ್ರೀಯಾ ನಿರೂಪಿಸಿದರು.

 

Related posts

ವಿದ್ಯಾರ್ಜನೆಯಲ್ಲಿ ಹಠ ಸಾಧಿಸುವವರಾಗಬೇಕು

Madhyama Bimba

ಶಾಲಾ ಬಸ್ಸಿನ ಚಾಲಕನಿಗೆ ಹಲ್ಲೆ: ಪ್ರಕರಣ ದಾಖಲು

Madhyama Bimba

ಯುವವಾಹಿನಿ ಕಾರ್ಕಳ ಘಟಕದ ವತಿಯಿಂದ ಛತ್ರಿ ಹಾಗೂ ರೇನ್‌ಕೋಟ್ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More