ಕಾರ್ಕಳ

ಕ್ರೈಸ್ಟ್‌ಕಿಂಗ್: ರಾಷ್ಟ್ರಮಟ್ಟದ ಸಿ.ಎ ಫೌಂಡೇಷನ್ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಶ್ರೀಮಾ ದೇವಾಡಿಗ

ಕಾರ್ಕಳ: ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆಯವರು(ಐಸಿಎಐ) ಇದೇ ಜೂನ್ ತಿಂಗಳಿನಲ್ಲಿ ನಡೆಸಿದ ಸಿ.ಎ ಫೌಂಡೇಷನ್ ಪರೀಕ್ಷೆಯಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಮಾ ದೇವಾಡಿಗ 293 ಅಂಕಗಳನ್ನು ಗಳಿಸಿ ಉತ್ತೀರ್ಣಳಾಗಿದ್ದಾಳೆ.

ಕ್ರೈಸ್ಟ್‌ಕಿಂಗ್ ಕಾಲೇಜಿನಲ್ಲಿಯೇ ತರಬೇತಿ ಪಡೆದ ಶ್ರೀಮಾ ದೇವಾಡಿಗ ತನ್ನ ಪ್ರಥಮ ಪ್ರಯತ್ನದಲ್ಲಿಯೇ ಉತ್ತೀರ್ಣರಾಗುವುದರ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾಳೆ.

ಇತ್ತೀಚೆಗೆ ಬಿಡುಗಡೆಯಾದ ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶದಲ್ಲಿಯೂ ಶ್ರೀಮಾ ದೇವಾಡಿಗ 596 ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ ಐದನೇ ರ್‍ಯಾಂಕ್ ಪಡದುಕೊಂಡಿದ್ದಳು. ಈಕೆ ತೆಳ್ಳಾರು 12ನೇ ಅಡ್ಡರಸ್ತೆ ನಿವಾಸಿಗಳಾದ ಸಂತೋಷ ದೇವಾಡಿಗ ಮತ್ತು ಶ್ರೀಮತಿ ಸುಮಂಗಲಾ ದೇವಾಡಿಗ ಇವರ ಪುತ್ರಿ.

ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎಸ್. ಪ್ರವೀಣ್ ಕುಮಾರ್

Madhyama Bimba

ಜೂ. 3ರಂದು ಶಿರ್ಲಾಲು ಶಾಲೆಯಲ್ಲಿ ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ – ಸಾಧಕ ವಿದ್ಯಾರ್ಥಿಗಳಿಗೆ ಸ್ವರ್ಣ ಪದಕ ಪ್ರದಾನ 

Madhyama Bimba

ಕಾರ್ಕಳ: ಅನಂತಶಯನ ಬಳಿ ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ- ಗಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More