ಮೂಡುಬಿದಿರೆ

ಶ್ರೀಮಹಾವೀರ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮ

ಶ್ರೀ ಮಹಾವೀರ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮದ ಅಂಗವಾಗಿ ಖ್ಯಾತ ಖಗೋಳಾಸಕ್ತರು ಹಾಗೂ ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕರಾದ ಪ್ರೊ.ಎಂ.ರಮೇಶ್ ಭಟ್ ಅವರು “ಬಾಹ್ಯಾಕಾಶ, ನಕ್ಷತ್ರಗಳು ಮತ್ತು ಖಗೋಳಶಾಸ್ತ್ರ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ತಮ್ಮ ಉಪನ್ಯಾಸದಲ್ಲಿ ಬಾಹ್ಯಾಕಾಶದ ಅದ್ಭುತ ಲೋಕ, ನಕ್ಷತ್ರಗಳು, ಗ್ರಹಗಳು ಹಾಗೂ ಬ್ರಹ್ಮಾಂಡದ ವೈಶಿಷ್ಟ್ಯಗಳ ಬಗ್ಗೆವಿದ್ಯಾರ್ಥಿಗಳಿಗೆ ಸರಳ ಹಾಗೂ ಮನೋಜ್ಞವಾಗಿ ವಿವರಿಸಿದರು. ಖಗೋಳಶಾಸ್ತ್ರದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದ ಅವರು, ವೈಜ್ಞಾನಿಕ ಮನೋಭಾವವನ್ನು ರೂಢಿಸಿಕೊಳ್ಳುವುದು ಇಂದಿನ ಯುವಜನತೆಗೆ ಅತ್ಯಗತ್ಯ ಎಂದು ತಿಳಿಸಿದರು. ನಿರಂತರ ಕುತೂಹಲ, ಅಧ್ಯಯನ ಮತ್ತು ವೈಜ್ಞಾನಿಕ ಚಿಂತನೆಯ ಮೂಲಕ ಜ್ಞಾನವನ್ನು ವಿಸ್ತರಿಸಿಕೊಳ್ಳಬಹುದು ಎಂದುವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಧಾಕೃಷ್ಣ ವಹಿಸಿದ್ದರು.

ಕಾರ್ಯಕ್ರಮದ ಸಂಯೋಜಕಿಯಾಗಿ ದೀಕ್ಷಾ ಕಾರ್ಯ ನಿರ್ವಹಿಸಿದರು. ಶ್ರುತಿ ಎಸ್. ಡಾಂಗೆ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪ್ರಥಮ ವರ್ಷದವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಮೂಡುಬಿದಿರೆ ಮಹಾವೀರ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್

Madhyama Bimba

ಚಿಕಿತ್ಸೆಗಾಗಿ ಸಾಯಿ ನೆರವು

Madhyama Bimba

ಅಮನ್ ಪ್ರಿಯಾಂಶ್ ಗೆ ಭಂಡಾರಿ ಸಂಘದಿಂದ ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More