ಕಾರ್ಕಳ

ಶೇ. 100 ಫಲಿತಾಂಶ ದಾಖಲಿಸಿದ ಪಳ್ಳಿ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

ಸರಕಾರಿ ಪದವಿ ಪೂರ್ವ ಕಾಲೇಜು ಪಳ್ಳಿ ಇದರ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶಗಳು 100% ದಾಖಲಾದ ಹಿನ್ನೆಲೆಯಲ್ಲಿ ಸಂಸ್ಥೆಯ ಕಾಲೇಜು ಅಭಿವೃದ್ಧಿ ಸಮಿತಿ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸಹಯೋಗದಲ್ಲಿ ಜೂ. 29ರಂದು ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು.

ಕಾರ್ಕಳದ ಶಾಸಕರಾದ ವಿ.ಸುನಿಲ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪಳ್ಳಿ ಪ್ರೌಢಶಾಲಾ ವಿಭಾಗದಲ್ಲಿ ಶೇ.100 ಫಲಿತಾಂಶ ಹಾಗೂ ಕಾಲೇಜು ವಿಭಾಗದಲ್ಲಿ ಸತತ ಮೂರು ಬಾರಿಗೆ ನೂರು ಶೇಕಡ ಫಲಿತಾಂಶವನ್ನು ದಾಖಲಿಸಿದ್ದು, ಹೆಮ್ಮೆಯ ಸಂಗತಿಯಾಗಿದ್ದು ಇದೇ ಪರಂಪರೆ ಮುಂದುವರೆಯುವಂತಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ವಿದ್ಯಾರ್ಥಿಗಳನ್ನು ಜೊತೆಗೆ ಉತ್ತಮ ಫಲಿತಾಂಶಕ್ಕಾಗಿ ಶ್ರಮಿಸಿದ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಇತಿಹಾಸ ವಿಷಯದಲ್ಲಿ ಅತ್ಯಧಿಕ ಅಂಕವನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಕನ್ನಡ ಭಾಷಾ ವಿಷಯದಲ್ಲಿ ಅತ್ಯಧಿಕ ಅಂಕವನ್ನು ಗಳಿಸಿದ ವಿದ್ಯಾರ್ಥಿನಿಯರಿಗೆ ಕನ್ನಡ ಉಪನ್ಯಾಸಕಿಯವರಾದ ಶ್ರೀಮತಿ ಜಯಶ್ರೀ ಎಂ.ಆರ್. ರವರು ನಗದು ಬಹುಮಾನವನ್ನು ನೀಡಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕರಾದ ಅವಿನಾಶ್ ಶೆಟ್ಟಿಯವರು ದ್ವಿತೀಯ ಪಿಯುಸಿ ಯಲ್ಲಿ ಅತ್ಯಧಿಕ ಅಂಕವನ್ನು ಗಳಿಸಿದ ವಿದ್ಯಾರ್ಥಿನಿಗೆ 10000 ನಗದು ಬಹುಮಾನವನ್ನು ನೀಡಿದರು.

ಸಂಸ್ಥೆಗೆ ಪ್ರತೀ ವರ್ಷ ವಿದ್ಯಾರ್ಥಿ ವೇತನ ನೀಡುತ್ತಿರುವ ಆಲ್ ಖಾರ್ಗೋ ಸಂಸ್ಥೆಯ ಮ್ಯಾನೇಜರ್ ಸವಿಸ್ತಾರ್ ಆಳ್ವ, ಪಳ್ಳಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಉಷಾ ಅಂಚನ್, ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕರಾದ ಅವಿನಾಶ್ ಶೆಟ್ಟಿ, ಉದ್ಯಮಿಗಳಾದ ಸುರೇಂದ್ರ ಹೆಗ್ಡೆ ಮಾಳಿಗೆಮನೆಯವರ ಭಾವ ರಮೇಶ್ ಶೆಟ್ಟಿ ಮತ್ತು ಎಸ್‌ಡಿಎಂಸಿ ನಿಕಟಪೂರ್ವ ಅಧ್ಯಕ್ಷರಾದ ದಿನೇಶ್ ನಾಯ್ಕ್‌ರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಬಿಸಿ ಅಧ್ಯಕ್ಷರಾದ ಜಗದೀಶ್ ಹೆಗ್ಡೆ ವಹಿಸಿಕೊಂಡಿದ್ದರು.

ಕಾರ್ಯಕ್ರಮದಲ್ಲಿ ಸಿ.ಬಿ.ಸಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರಾದ ರಘುನಾಥ್ ಶೆಟ್ಟಿ, ಮನೋಹರ ಶೆಟ್ಟಿ, ಗೋವಿಂದ ಜೋಗಿ, ಸುಧಾಕರ ಶೆಟ್ಟಿ , ಪ್ರಶಾಂತ್ ಶೆಟ್ಟಿ, ದುರ್ಗಾದಾಸ್ ಕಾಮತ್, ಶೇಖರ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುರೇಶ್ ಪಾಣರ, ಉಪಾಧ್ಯಕ್ಷರಾದ ಅಶೋಕ್ ನಾಯ್ಕ್ ಮತ್ತು ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ನಾಗರತ್ನ ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಹೀಲದಳ್ಳಿ ಮಂಜಪ್ಪ ಸ್ವಾಗತಿಸಿದರು. ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ರಾಜೇಶ್ ಧನ್ಯವಾದ ಸಲ್ಲಿಸಿದರು. ಶಿಕ್ಷಕಿಯವರಾದ ಶ್ರೀಮತಿ ಜ್ಯೋತಿ ಮತ್ತು ಉಪನ್ಯಾಸಕರಾದ ಮುಹಮ್ಮದ್ ರಿಯಾಝ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಗಾಂಧಿ ಜಯಂತಿ ಪ್ರಯುಕ್ತ ಕೆಕೆಎಂಪಿಯಿಂದ ಪ್ರಯಾಣಿಕರ ತಂಗುದಾಣ ಸ್ವಚ್ಛತಾ ಕಾರ್ಯಕ್ರಮ

Madhyama Bimba

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Madhyama Bimba

ಮುಂಗಾರು ಬೆಳೆ ಸಮೀಕ್ಷೆ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More