ಕಾರ್ಕಳ

ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ಮಾಲಿನಿ ಜೆ. ಶೆಟ್ಟಿ – ಕಾರ್ಯದರ್ಶಿಯಾಗಿ ಜ್ಯೋತಿ ರಮೇಶ್‌

ಕಾರ್ಕಳ : ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟಗೊಂಡಿದ್ದು, ಉಪಾಧ್ಯಕ್ಷರಾಗಿ ಕಾರ್ಕಳ ತಾಲೂಕಿನ ನೀರೆ ಗ್ರಾಮದ ಮಾಲಿನಿ ಜೆ. ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಕುಕ್ಕುಂದೂರು ಗ್ರಾಮದ ಪರಪ್ಪುವಿನ ಜ್ಯೋತಿ ರಮೇಶ್‌ ಆಚಾರ್ಯ ಆಯ್ಕೆಯಾಗಿದ್ದಾರೆ.

ಮಾಲಿನಿ ಜೆ. ಶೆಟ್ಟಿಯವರು ನೀರೆ – ಕಣಜಾರು ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾಗಿ, ತಾಲೂಕು ಪಂಚಾಯತ್‌ ಉಪಾಧ್ಯಕ್ಷೆ ಮತ್ತು ಅಧ್ಯಕ್ಷರಾಗಿ, ತಾಲೂಕು ಮಹಿಳಾ ಮೋರ್ಚಾದ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಇದೀಗ ಎರಡನೇ ಬಾರಿಗೆ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದಲ್ಲದೆ ಧಾರ್ಮಿಕ ಹಾಗೂ ಸಾಮಾಜಿಕವಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.

ಜ್ಯೋತಿ ರಮೇಶ್‌ ಅವರು ಕುಕ್ಕುಂದೂರು ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ, ಎಪಿಎಂಸಿ ನಾಮನಿರ್ದೇಶಿತ ನಿರ್ದೇಶಕಿಯಾಗಿ, ಕಾರ್ಕಳ ತಾಲೂಕು ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ, ಕಾರ್ಕಳ ಮಂಡಲ ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕಾರ್ಕಳ ಲಯನ್ಸ್‌ ಸಿಟಿ ಸ್ಥಾಪಕಾಧ್ಯಕ್ಷರಾಗಿರುವ ಇವರು ಧಾರ್ಮಿಕ ಹಾಗು ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

Related posts

ಎಳ್ಳಾರೆ ಮುಳ್ಳಾಡು ಮಹಿಳಾ ಮೋರ್ಚಾ ವತಿಯಿಂದ ನಿವೃತ್ತ ಶಿಕ್ಷಕ ಕೇಶವ ನಾಯಕ್‌ರಿಗೆ ಸನ್ಮಾನ

Madhyama Bimba

ಆಡಳಿತ ನ್ಯಾಯಾಧೀಕರಣ ತರಬೇತಿ: ಅರ್ಜಿ ಆಹ್ವಾನ

Madhyama Bimba

ದಲಿತ ಸಂಘಟನೆಗಳ ನಾಯಕರಿಂದ ಕಾರ್ಕಳ ತಹಶೀಲ್ದಾರರಿಗೆ ಮನವಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More