ನಾಡ್ಪಾಲು ಗ್ರಾಮ ಪಂಚಾಯತ್‌ನಲ್ಲಿ ಸುಧೀರ್ಘ ಒಂಬತ್ತು ವರ್ಷಗಳ ಕಾಲ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಕಾಡೂರು ಪಂಚಾಯತ್‌ಗೆ ವರ್ಗಾವಣೆಗೊಂಡಿರುವ ಶ್ರೀಮತಿ ದೇವಕಿಯವರ ಬೀಳ್ಕೊಡುಗೆ ಕಾರ್ಯಕ್ರಮವು ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ನಡೆಯಿತು.

ಪಂಚಾಯತ್ ಆಡಳಿತಧಿಕಾರಿ ವಿದ್ಯಾಧರ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಗ್ರಾಮಸ್ಥರ ಪರವಾಗಿ ಕಾರ್ಯದರ್ಶಿ ದೇವಕಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಜಲಜ ಪೂಜಾರ್ತಿ, ದಿನೇಶ್ ಹೆಗ್ಡೆ, ನವೀನ್ ಕುಮಾರ್, ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರಂದರ ಎಸ್, ಆಯುಷ್ ವೈದ್ಯಾಧಿಕಾರಿ ಡಾ. ರಶ್ಮಿ ಹಾಗೂ ಮಾಜಿ ಪಂಚಾಯತ್ ಸದಸ್ಯರುಗಳು ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೀತಲ್ ಕಾರ್ಯಕ್ರಮ ನಿರೂಪಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು.
