Blog

ಬೆಳೆ ವಿಮೆ ಯೋಜನೆ : ನೋಂದಣಿ ಅವಧಿ ವಿಸ್ತರಣೆ

ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ, ಜಿಲ್ಲೆಯ ರೈತರನ್ನು ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳ ವಿಮಾ ಯೋಜನೆಗೆ ಒಳಪಡಿಸಲು ನಿಗಧಿಪಡಿಸಲಾಗಿದ್ದ ಬೆಳೆ ವಿಮೆ ನೋಂದಣಿ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ.

ಜಿಲ್ಲೆಯ ಎಲ್ಲಾ ಅಧಿಸೂಚಿತ ವಿಮಾ ಘಟಕಗಳ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ನೊಂದಣಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಬೆಳೆ ವಿಮೆಗೆ ಒಳಪಡುವ ರೈತರು ಕೂಡಲೇ ತಮ್ಮ ಹತ್ತಿರದ ಬ್ಯಾಂಕ್ ಶಾಖೆಗಳು, ಗ್ರಾಮೀಣ ಸಹಕಾರಿ ಬ್ಯಾಂಕ್ ಶಾಖೆಗಳು, ಸಿ.ಎಸ್.ಸಿ ಹಾಗೂ ಗ್ರಾಮ ಒನ್ ಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ಒಳಪಡುವಂತೆ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಮುಂಡ್ಲಿ ಶಾಲೆಯಲ್ಲಿ ಗುರು ಚರಣಕೆ ನಮನ ಕಾರ್ಯಕ್ರಮ

Madhyama Bimba

ಹೆಬ್ರಿಯಲ್ಲಿ ಪೂಜಿಸಲ್ಪಡುವ ಶಾರದಾ ಮೂರ್ತಿ

Madhyama Bimba

ನವಮಿ ಟ್ರಾವೆಲ್ಸ್ ಲಕ್ಷ್ಮಣ್ ಇನ್ನಿಲ್ಲ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More