Blog

ಮೂಡುಬಿದಿರೆ ಮಹಾವೀರ ಕಾಲೇಜಿನಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಶ್ರೀ ಮಹಾವೀರ ಕಾಲೇಜಿನ ಪ್ರಥಮ ವರ್ಷದ ಬಿ.ಸಿ.ಎ. ವಿದ್ಯಾರ್ಥಿಗಳಿಗೆ ಮಾಹಿತಿ ತಂತ್ರಜ್ಞಾನ (ಐಟಿ) ಕ್ಷೇತ್ರದಲ್ಲಿ ಲಭ್ಯವಿರುವ ವಿವಿಧ ಉದ್ಯೋಗಾವಕಾಶಗಳು ಮತ್ತು ಉನ್ನತ ಶಿಕ್ಷಣದ ಹಾದಿಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ, ವಿಶೇಷ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಗಳಾದ ಡಾ. ವನ್ನೂರ್ ಸ್ವಾಮಿ ಅವರು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಾಫ್ಟ್ವೇರ್ ಡೆವಲಪರ್, ಡೇಟಾ ಅನಲಿಸ್ಟ್, ವೆಬ್ ಡೆವಲಪರ್ ಮತ್ತು ಸೈಬರ್ ಸೆಕ್ಯುರಿಟಿ ಮುಂತಾದ ಕ್ಷೇತ್ರಗಳಲ್ಲಿರುವ ಅಪಾರ ಅವಕಾಶಗಳ ಬಗ್ಗೆ ವಿವರಿಸಿದರು.

ಪ್ರೋಗ್ರಾಮಿಂಗ್ ಭಾಷೆಗಳಾದ C, C++, Java, ಮತ್ತು Python ಕಲಿಕೆಯ ಮಹತ್ವ, ಐಟಿ ಕಂಪನಿಗಳು, ಸರ್ಕಾರಿ ವಲಯ ಮತ್ತು ಸ್ಟಾರ್ಟ್-ಅಪ್ಗಳಲ್ಲಿನ ಉದ್ಯೋಗಗಳ ಬೇಡಿಕೆ ಮತ್ತು ಸಂವಹನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನದ ಅಗತ್ಯತೆ ಕುರಿತು ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ವಹಿಸಿದ್ದರು.
ಕಾರ್ಯಕ್ರಮದ ಸಂಯೋಜಕಿ ದೀಕ್ಷಾ ಉಪಸ್ಥಿತರಿದ್ದರು. ಉಪನ್ಯಾಸಕಿ ನಿಶಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೈಲೂರುನಲ್ಲಿ ಯಕ್ಷಗಾನ ತರಬೇತಿ

Madhyama Bimba

ಪರಶುರಾಮ ಪ್ರತಿಮೆ ನಿರ್ಮಾತನ ವಿರುದ್ಧದ ಪ್ರಕರಣ ರದ್ದಿಗೆ ಹೈಕೋರ್ಟ್ ನಕಾರ

Madhyama Bimba

ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಕ್ರೈಸ್ಟ್‌ಕಿಂಗ್ ನ ಅಂಕುಶ್ ಹಾಗೂ ಲಕ್ಷಣ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More