ಕಾರ್ಕಳಹೆಬ್ರಿ

ಮನಿಯಾಲು ನಾಗೇಶ್ ನಾಯಕ್ ನಿಧನ

ಮನಿಯಾಲು ನಿವಾಸಿ, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರರಾಗಿದ್ದ ನಾಗೇಶ್ ನಾಯಕ್ (65) ಅವರು ಹೃದಯಘಾತದಿಂದ ನಿಧನರಾದರು.

ಧಾರ್ಮಿಕ, ಸಾಮಾಜಿಕ ಹಾಗೂ ಜನಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರರಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿ, ಸಮಾಜದ ಗೌರವಕ್ಕೆ ಪಾತ್ರರಾಗಿದ್ದರು. ಅವರ ಸರಳ ವ್ಯಕ್ತಿತ್ವ, ಸೌಜನ್ಯ ಹಾಗೂ ಸೇವಾ ಮನೋಭಾವದಿಂದ ಅಪಾರ ಸ್ನೇಹಿತರು ಮತ್ತು ಬಂಧುಗಳ ಪ್ರೀತಿಯನ್ನು ಗಳಿಸಿದ್ದರು.

ಮೃತರು ಪತ್ನಿ, ಒಬ್ಬ ಪುತ್ರ, ಒಬ್ಬ ಪುತ್ರಿ, ಸೊಸೆ, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗ ಮತ್ತು ಸ್ನೇಹಿತರನ್ನು ಅಗಲಿದ್ದಾರೆ.

ಅವರ ನಿಧನಕ್ಕೆ ಬಂಧು-ಮಿತ್ರರು, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸ್ಥಳೀಯ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Related posts

ಸೂರಾಲು: 80ನೇ ಸ್ವಾತಂತ್ರ್ಯ ದಿನಾಚರಣೆ-ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ವಿತರಣೆ

Madhyama Bimba

ಕುಕ್ಕುಂದೂರಿನ ಪೊಸನೊಟ್ಟಿನಲ್ಲಿರುವ ಕಲ್ಲು ಕಟ್ಟಿಂಗ್ ಫ್ಯಾಕ್ಟರಿಗೆ ಹೋಗುವ ಲಾರಿಯ ಅಬ್ಬರಕ್ಕೆ ಕೊಚ್ಚಿ ಹೋದ ರಸ್ತೆ: ರೊಚ್ಚಿಗೆದ್ದ ಗ್ರಾಮಸ್ಥರು

Madhyama Bimba

ಕಡ್ತಲ: ವರ್ಗಾವಣೆಗೊಂಡ ಪಿಡಿಓ ಸುರೇಖಾರವರಿಗೆ ಅಭಿನಂದನಾ ಸಮಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More