ಕಾರ್ಕಳ

ಕಾರ್ಕಳ ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾದ ವಾರ್ಷಿಕ ಮಹಾಸಭೆ

ಕಾರ್ಕಳ: ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಇದರ 83ನೇ ವಾರ್ಷಿಕ ಮಹಾಸಭೆಯು ಜೂ. 21ರಂದು ಪೆರ್ವಾಜೆಯ ವಿಶ್ವಕರ್ಮ ಸಮಾಜ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್. ಮಾತನಾಡಿ, ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಲಭ್ಯವಿರುವ ವಿವಿಧ ಸಾಲ ಸೌಲಭ್ಯಗಳ ಕುರಿತು ಮಾಹಿತಿ ನೀಡಿ, ಸಮಾಜದ ಶೈಕ್ಷಣಿಕ ಚಟುವಟಿಕೆಗಳನ್ನು ಶ್ಲಾಘಿಸಿದರು.

ಸಭೆಯ ಅಧ್ಯಕ್ಷರಾದ ಬಿ. ಪ್ರಕಾಶ್ ಆಚಾರ್ಯ ಮಾತನಾಡಿ, “ಸಂಘಟನೆಗಳ ಬೆಳವಣಿಗೆಗೆ ಎಲ್ಲರ ಸಹಕಾರ ಹಾಗೂ ಒಗ್ಗಟ್ಟು ಅತ್ಯಗತ್ಯ” ಎಂದು ತಿಳಿಸಿದರು.

ವೇದಿಕೆಯಲ್ಲಿ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶಿಲ್ಪಿ ರಾಮಚಂದ್ರ ಆಚಾರ್ಯ ಉಪಸ್ಥಿತರಿದ್ದರು.

ಸಭೆಯಲ್ಲಿ ಅಧ್ಯಕ್ಷರಾದ ಬಿ. ಪ್ರಕಾಶ್ ಆಚಾರ್ಯ ಸ್ವಾಗತಿಸಿದರು. ಕಾರ್ಯದರ್ಶಿ ಶಿಲ್ಪಿ ಭಾಸ್ಕರ್ ಬಿ. ಎಸ್. ಆಚಾರ್ಯ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಪಿ. ವಸಂತ್ ಆಚಾರ್ಯ ಲೆಕ್ಕಪತ್ರ ಮಂಡಿಸಿದರು. ಕೆ. ವಿಶ್ವನಾಥ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು ಹಾಗೂ ಅಶೋಕ್ ಆಚಾರ್ಯ ವಂದಿಸಿದರು.

ಈ ಸಂದರ್ಭದಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ, ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ಮತ್ತು ದತ್ತಿನಿಧಿ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಶಿಲ್ಪಿ ರಾಮಚಂದ್ರ ಆಚಾರ್ಯ ದೀಪ ಬೆಳಗಿಸಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, “ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವುದು ಜೀವನದಲ್ಲಿ ಯಶಸ್ಸಿಗೆ ಅತ್ಯಂತ ಮುಖ್ಯ” ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ನೀತಾ ಶೆಟ್ಟಿ, ಶರತ್ ಹಾಗೂ ರಿಷಿ ಜೈನ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ದತ್ತಿನಿಧಿ ಹಾಗೂ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.

ಕಾರ್ಯಕ್ರಮದ ವರದಿಯನ್ನು ಕೆ. ದಿನೇಶ್ ಆಚಾರ್ಯ ಮಂಡಿಸಿದರು. ಜಯರಾಮ ಆಚಾರ್ಯ ವಂದಿಸಿದರು.

Related posts

ಕಾರ್ಕಳ ಜೋಡುರಸ್ತೆಯ ದುರ್ಗಾ ಎಲೆಕ್ರ್ಟಾನಿಕ್ಸ್ & ಫರ್ನಿಚರ್ಸ್’ನಲ್ಲಿ ವಿಶೇಷ ಕೊಡುಗೆಗಳು ಲಭ್ಯ-ಪ್ರತಿಯೊಂದು ಖರೀದಿಯ ಮೇಲೆ ವಿಶೇಷ ರಿಯಾಯಿತಿ ಮತ್ತು ಗಿಫ್ಟ್ ಕೂಪನ್

Madhyama Bimba

ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Madhyama Bimba

ಹೆಬ್ರಿ: ಮುಖ್ಯಮಂತ್ರಿಗಳ ಹೆಬ್ರಿ ಭೇಟಿ ಹಿನ್ನೆಲೆಯಲ್ಲಿ ವಿಶೇಷ ಗ್ರಾಮ ಸಭೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More