ಕಾರ್ಕಳಹೆಬ್ರಿ

ಶಿವಪುರ-1 ಶಾಲೆಯಲ್ಲಿ ಯಕ್ಷ ಶಿಕ್ಷಣ ತರಗತಿಗಳ ಉದ್ಘಾಟನೆ ಹಾಗೂ ವಿವಿಧ ಕೊಡುಗೆಗಳ ವಿತರಣೆ

ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿವಪುರ-೧ರಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ.), ಮಂಗಳೂರು – ಕಾರ್ಕಳ ಘಟಕದ ಪ್ರಾಯೋಜಕತ್ವದಲ್ಲಿ ಯಕ್ಷ ಶಿಕ್ಷಣ ತರಗತಿಗಳ ಉದ್ಘಾಟನಾ ಸಮಾರಂಭ ಹಾಗೂ ಶಾಲಾ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಕೊಡುಗೆಗಳ ವಿತರಣಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಐಡಿ ಕಾರ್ಡ್, ಬೆಲ್ಟ್, ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳಿಗೆ ಪೀಠೋಪಕರಣಗಳು, ಶಾಲಾ ಆವರಣಕ್ಕೆ ನುಡಿಮುತ್ತುಗಳ ನಾಮಫಲಕಗಳು ವಿತರಿಸಲಾಯಿತು. ಅಲ್ಲದೆ ಸಮಾಜಮುಖಿ ಸೇವೆ ಸಲ್ಲಿಸಿದ ಸಾಧಕರು ಮತ್ತು ದಾನಿಗಳನ್ನು ಗೌರವಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಯಡ್ದೆ ರಾಘವೇಂದ್ರ ಪೂಜಾರಿ ವಹಿಸಿದ್ದರು.
ಕಾರ್ಯಕ್ರಮವನ್ನು ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯ ಮಾಜಿ ನಿರ್ದೇಶಕರಾದ ಬಿ. ಸದಾಶಿವ ಪ್ರಭು, ಐಎಎಸ್ (ನಿವೃತ್ತ)ರವರು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಅಶೋಕ್ ಕುಮಾರ್, ಮಂಗಳೂರು ಯಕ್ಷದ್ರುವ ಪಟ್ಲ ಫೌಂಡೇಶನ್‌ನ ಗೌರವ ಕಾರ್ಯದರ್ಶಿ ರೋಟೇರಿಯನ್ ಆರೂರು ತಿಮ್ಮಪ್ಪ ಶೆಟ್ಟಿ, ಸೋಮೇಶ್ವರ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ಡಾ. ರಶ್ಮಿ, ಯಕ್ಷದ್ರುವ ಪಟ್ಲ ಫೌಂಡೇಶನ್ ಕಾರ್ಕಳ ಘಟಕದ ಸಂಚಾಲಕರಾದ ಮಹಾವೀರ ಪಾಂಡೆ, ಹೆಬ್ರಿ ಶುಭಲಹರಿ ನಿವೃತ್ತ ಮುಖ್ಯ ಶಿಕ್ಷಕರಾದ ಹರಿದಾಸ ಹೆಗ್ಡೆ,
ಉದ್ಯಮಿ ಅಜಿತ್ ಕುಮಾರ್ ಶೆಟ್ಟಿ, ಶಿವಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ಹೆಬ್ರಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ರಮೇಶ್ ಕುಮಾರ್, ಮಂದಾರ್ತಿ ಯಕ್ಷಗುರುಗಳಾದ ಮಹೇಶ್ ಕುಮಾರ್, ಶಿವಪುರ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಶೋಭಾ ಶೆಟ್ಟಿ, ಶಿವಪುರ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರೀತೀಶ್ ಕುಮಾರ್ ಶೆಟ್ಟಿ, ಶಿವಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶೇಖರ ಶೆಟ್ಟಿ, ಹಾಗೂ ಶಿವಪುರ ಉದ್ಯಮಿ ಗಣೇಶ್ ಕುಲಾಲ್ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಗುಲಾಬಿ ಸ್ವಾಗತಿಸಿದರು. ಅಧ್ಯಾಪಕರಾದ ರಮಾನಂದ ಶೆಟ್ಟಿ ನಿರೂಪಿಸಿದರು. ಶಾಲೆಯ ಅಧ್ಯಾಪಕ ವೃಂದ ಕಾರ್ಯಕ್ರಮದ ಸಂಯೋಜನೆಯಲ್ಲಿ ಸಹಕರಿಸಿತು. ಶಾಲಾ ಅಧ್ಯಾಪಕಿ ಶ್ರೀಮತಿ ವೀಣಾ ಕುಮಾರಿ ಎಚ್.ಎನ್ ಧನ್ಯವಾದವಿತ್ತರು.

Related posts

ಕಾರ್ಕಳ: ಸಾಣೂರಿನಲ್ಲಿ ಕೋಳಿ ಅಂಕ- ಪ್ರಕರಣ ದಾಖಲು

Madhyama Bimba

ಕಾರ್ಕಳ ಸರಕಾರಿ ಪಾಲಿಟೆಕ್ನಿಕ್ ರೋಟ್ರಾಕ್ಟ್ ಕ್ಲಬ್ ಪದಗ್ರಹಣ

Madhyama Bimba

ರೋಟರಿ ಕ್ಲಬ್ ಕಾರ್ಕಳ : ನೋಟ್ ಪುಸ್ತಕ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More