Blog

ದೂಪದಕಟ್ಟೆ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

 

 

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಅತ್ತೂರು ದೂಪದಕಟ್ಟೆ

 

ಅತ್ತೂರು ದೂಪದಕಟ್ಟೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಆಚರಿಸಲಾಗುತ್ತಿರುವ ಗಣೇಶೋತ್ಸವ 2026ರ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಇಂದು ಪದ್ಮ ಕಾಂಪ್ಲೆಕ್ಸ್‌ನಲ್ಲಿ ನಡೆಯಿತು. ಇದಕ್ಕೂ ಮುನ್ನ ದೂಪದಕಟ್ಟೆ ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆಯಲಾಯಿತು.

 

ಸಮಾರಂಭಕ್ಕೆ ರಾಜೇಶ್ವರಿ ಎಜುಕೇಶನ್ ಫೌಂಡೇಶನ್‌ನ ಅಧ್ಯಕ್ಷರಾದ ದೇವಿ ಪ್ರಸಾದ್ ಶೆಟ್ಟಿ ಅವರು ಮತ್ತು NMAMIT ನಿಟ್ಟೆಯ ಪ್ರೊಫೆಸರ್ ಹಾಗೂ KRMSSನ ಅಧ್ಯಕ್ಷರಾದ ಡಾ. ಸುರೇಂದ್ರ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

 

ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಅರುಣ್ ಸೇನ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಗುರುರಾಜ್ ಭಟ್, ಸದಾನಂದ ಶೆಟ್ಟಿ, ರಾಜೇಶ್ ಸಾಲ್ಯಾನ್, ಸತೀಶ್ ರಾವ್ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ನಿತಿನ್ ಸಾಲಿಯಾನ್ ಕಾರ್ಯಕ್ರಮವನ್ನು ನಿರ್ವಹಿಸಿದರು, ಅರ್ಜುನ್ ಕುಮಾರ್ ವಂದನಾರ್ಪಣೆ ಮಾಡಿದರು.

 

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳು ಸಮಿತಿಯ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿ, ಗಣೇಶೋತ್ಸವ ಆಚರಣೆಯು ಸಾಮಾಜಿಕ ಒಗ್ಗಟ್ಟಿಗೆ ಪೂರಕವಾಗಿದೆ ಎಂದು ಅಭಿಪ್ರಾಯಪಟ್ಟರು.

 

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

ಅತ್ತೂರು ದೂಪದಕಟ್ಟೆ

Related posts

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Madhyama Bimba

ಲೀಲಾವತಿ ಪೊಸಲಾಯಿಯವರಿಗೆ ರಂಗ ಚತುರೆ ಬಿರುದು ಪ್ರಧಾನ

Madhyama Bimba

ಮುಂಡ್ಲಿ ಶಾಲೆಯಲ್ಲಿ ಗುರು ಚರಣಕೆ ನಮನ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More