Blog

ಶಾಸಕ ಯಶ್ಪಾಲ್ ವಿರುದ್ಧ ಕಾರ್ಕಳ ಕಾಂಗ್ರೆಸ್ ದೂರು

ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಅವರ ವಂಶವನ್ನು ದ್ವಂಸ ಮಾಡುವುದಾಗಿ ಹೇಳಿಕೆ ನೀಡಿರುವ ಶಾಸಕ ಯಶಪಾಲ್ ವಿರುದ್ಧ ಕಾರ್ಕಳ ಬ್ಲಾಕ್ ಕಾಂಗ್ರೆಸ್ಅಧ್ಯಕ್ಷ ರಾದ ಶುಭದ್ ರಾವ್ ನೇತೃತ್ವ ದಲ್ಲಿ ಕಾಂಗ್ರೆಸ್ ನಿಯೋಗವು ಕಾರ್ಕಳ ನಗರ ಪೊಲೀಸ್ ಠಾಣೆ ಗೆ ದೂರು ನೀಡಿತು.

ವಿದ್ಯಾರ್ಥಿಗಳ ಪರವಾಗಿ ರಾಹುಲ್ ಗಾಂಧಿ ಹೋರಾಟ ಮಾಡಿದ್ದೆ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದ್ದು ಈ ಸಂಬಂಧ ಉಡುಪಿ ಜಿಲ್ಲಾ ಬಿಜೆಪಿ ಸಮಿತಿಯು ವಿದ್ಯಾರ್ಥಿಗಳ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಶಾಸಕ ಯಶಪಾಲ್ ಸುವರ್ಣ ಅವರು ರಾಹುಲ್ ಗಾಂಧಿಯವರಿಗೆ ಕೊಲೆ ಬೆದರಿಕೆ ಒಡ್ಡಿದ್ದು ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನಿಯೋಗ ದೂರು ನೀಡಿದೆ.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರುಗಳಾದ ಉದಯ ಶೆಟ್ಟಿ ಕುಕ್ಕುಂದೂರು, ಸುಧಾಕರ ಶೆಟ್ಟಿ ಮುಡಾರ್, ಅನಿಲ್ ಪೂಜಾರಿ ನೆಲ್ಲಿಗುಡ್ಡೆ, ವಿವೇಕಾನಂದ ಶೆಣೈ, ಜಾರ್ಜ್ ಕಾಸ್ಟಲಿನ್, ಸುನಿಲ್ ಭಂಡಾರಿ, ರಾಜೇಂದ್ರ ದೇವಾಡಿಗ, ಶ್ರೀಮತಿ ಪ್ರತಿಮಾ ರಾಣೆ, ಜೋಕಿಮ್ ಪಿಂಟೋ, ಆರಿಫ್ ಕಲ್ಲೋಟ್ಟೆ, ಅಕ್ಷಯ್ ಬಂಗೇರ, ಹೇಮಂತ್ ಆಚಾರ್ಯ ಉಪಸ್ಥಿತರಿದ್ದರು.

Related posts

ಉಡುಪಿ ಜಿಲ್ಲಾ ಶಾಲೆಗೆ ಆಗಸ್ಟ್ 4 ರಜೆ

Madhyama Bimba

ಸಿಇಟಿ ಫಲಿತಾಂಶದಲ್ಲಿ ಎಕ್ಸಲೆಂಟ್ ಕಾಲೇಜಿನ ಅದ್ಭುತ ಸಾಧನೆ

Madhyama Bimba

ಶಿರ್ತಾಡಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಪ್ರಶಸ್ತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More