ಕಾರ್ಕಳಹೆಬ್ರಿ

ಶಿವಪುರ ಪ್ರೌಢಶಾಲೆಯಲ್ಲಿ ಚೆಸ್ ಪಂದ್ಯಾಟ

ಉಡುಪಿ ಜಿಲ್ಲಾ ಪಂಚಾಯತ್ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕಾರ್ಕಳ ಹಾಗೂ ಸರ್ಕಾರಿ ಪ್ರೌಢಶಾಲೆ, ಶಿವಪುರ ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟವು ಜು. 29ರಂದು ಸರ್ಕಾರಿ ಪ್ರೌಢಶಾಲೆ ಶಿವಪುರದಲ್ಲಿ ನಡೆಯಿತು.


ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಾಘವೇಂದ್ರ ಅಡಿಗ ವಹಿಸಿದ್ದರು.
ಶಿವಪುರ ಗ್ರಾಮಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಶೋಭಾ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನಿಕಟಪೂರ್ವ ತಾಲೂಕು ಪಂಚಾಯತ್ ಅಧ್ಯಕ್ಷರಾದ ರಮೇಶ್ ಕುಮಾರ್, ಮಾಜಿ ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ಶಂಕರ್ ಭಡ್ಕಿಲ್ಲಾಯ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸುಮಿತ್ರಾ ನಾಯ್ಕ, ಶಿಕ್ಷಕರಾದ ರಮಾನಂದ ಶೆಟ್ಟಿ, ಹರೀಶ್ ಪೂಜಾರಿ ಉಪಸ್ಥಿತರಿದ್ದರು.

ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕರಾದ ರವಿಚಂದ್ರ ಕಾರಂತರವರು ಪ್ರಾಸ್ತಾವಿಕ ಮಾತುಗಳನಾಡಿದರು. ಮುಖ್ಯೋಪಾಧ್ಯಾಯರಾದ ಶರ್ಮಿಳ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಯಶೋದಾ ವಂದಿಸಿದರು. ಶಿಕ್ಷಕರಾದ ಗಣೇಶ ಮರಕಾಲ ಕಾರ್ಯಕ್ರಮ ನಿರೂಪಿಸಿದರು.
ವಿವಿಧ ಶಾಲೆಗಳಿಂದ ಸುಮಾರು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚೆಸ್ ಪಂದ್ಯಾಕೂಟದಲ್ಲಿ ಪಾಲ್ಗೊಂಡರು.

17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಕೃಶಾಂಗ್ ಪ್ರಭು, ವರುಣ್ ಕೆ ಕಾಮತ್, ಅಶ್ವಿನ್ ಎಸ್, ಜೀತ್ ನಾಯಕ್, ಅಮಯ್ ಎ ಪೂಜಾರಿ. 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಮೌಲ್ಯ, ಸಾನ್ವಿ, ಜೇಷ್ಠ ಕೆ ನಾಯಕ್, ಸನ್ನಿಧಿ, ಅವನಿ ಆರ್ ಶೆಟ್ಟಿ ವಿಜೇತರಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದರು.

14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಮೋಹಿತ್, ತಶ್ವಿನ್, ವಿದ್ವತ್ ಸಮೃದ್ದ್ ಭಂಡಾರಿ, ಪ್ರಜ್ವಲ್ ವಿಶ್ವನಾಥ್ ಚೌವಾನ್ ಆಯ್ಕೆಯಾದರು. 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಕಶ್ವಿ ಜೆ, ಯಾಶ್ನಿ, ಶೃತಿ ಆಚಾರ್ಯ, ವೈಶ್ಣವಿ, ಸುದೀಕ್ಷಾ ನಾಯಕ್ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.

Related posts

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

Madhyama Bimba

ಸೂರಾಲು: 80ನೇ ಸ್ವಾತಂತ್ರ್ಯ ದಿನಾಚರಣೆ-ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ವಿತರಣೆ

Madhyama Bimba

ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಯೋಜನೆಗಳಿಗೆ ಸರ್ಕಾರ ಆದ್ಯತೆ ನೀಡಬೇಕು : ನೇಮಿರಾಜ ರೈ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More