ಮೂಡುಬಿದಿರೆ

ಬ್ರಹ್ಮಶ್ರೀ ನಾರಾಯಣಗುರುವರ್ಯರ 172ನೇ ಜನ್ಮ ದಿನಾಚರಣೆ ಹಾಗೂ ಲಕ್ಷ ಕುಂಕುಮಾರ್ಚನೆಗೆ ಆಮಂತ್ರಣ ಪತ್ರಿಕೆ ಬಿಡುಗಡೆ

ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ.) ಕಡಂದಲೆ–ಪಾಲಡ್ಕ ವತಿಯಿಂದ, ಬ್ರಹ್ಮಶ್ರೀ ನಾರಾಯಣಗುರುವರ್ಯರ 172ನೇ ಜನ್ಮ ದಿನಾಚರಣೆ, 11ನೇ ವರ್ಷದ ಲಕ್ಷ ಕುಂಕುಮಾರ್ಚನೆ ಹಾಗೂ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯ ಅಂಗವಾಗಿ 2026ರ ಆಗಸ್ಟ್ 28ರಂದು ನಡೆಯಲಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಸಂಘದ ಸಭಾಂಗಣದಲ್ಲಿ ನಡೆಯಿತು.

ಸಂಘದ ಸರ್ವ ಸದಸ್ಯರ ಸಮ್ಮುಖದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅಧಿಕೃತವಾಗಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಸೇವಾದಳದ ಸದಸ್ಯರು, ಮಹಿಳಾ ಘಟಕದ ಸದಸ್ಯರು ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

ಆಗಸ್ಟ್ 28ರಂದು ನಡೆಯಲಿರುವ ಬ್ರಹ್ಮಶ್ರೀ ನಾರಾಯಣಗುರುವರ್ಯರ ಜಯಂತಿ, ಲಕ್ಷ ಕುಂಕುಮಾರ್ಚನೆ ಹಾಗೂ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಕ್ತಾದಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ವತಿಯಿಂದ ಮನವಿ ಮಾಡಲಾಗಿದೆ.

Related posts

ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ‘ಪಶ್ಚಿಮ ಘಟ್ಟಗಳ ಸಸ್ಯ ವೈವಿಧ್ಯತೆ’ ಕುರಿತು ಜಾಗೃತಿ ಕಾರ್ಯಕ್ರಮ

Madhyama Bimba

ಎಕ್ಸಲೆಂಟ್‌ನಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಭವ್ಯ ಚಾಲನೆ

Madhyama Bimba

ಡಿಜೆಯಲ್ಲಿ ರೊಬೋಟಿಕ್ ಲ್ಯಾಬ್ ಮತ್ತು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಲ್ಯಾಬ್ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More