ಬೈಲೂರು: ನೀರೆಬೈಲೂರು ಲಯನ್ಸ್ ಕ್ಲಬ್ ವತಿಯಿಂದ ಬೈಲೂರು ಪದವಿ ಪೂರ್ವ ಕಾಲೇಜಿನ ಪರಿಸರದಲ್ಲಿ ವನ ಮಹೋತ್ಸವ ಹಾಗೂ ಸ್ವಚ್ಛತಾ ಕಾರ್ಯ ಕ್ರಮವು ಆ. 02ರಂದು ನಡೆಯಿತು.

ವನಮಹೋತ್ಸವದ ಪ್ರಯುಕ್ತ ಕಾಲೇಜಿನ ಪರಿಸರದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು ಹಾಗೂ ಸ್ವಚ್ಛತಾ ಕಾರ್ಯವನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ವಲಯಾಧ್ಯಕ್ಷರಾದ ಪ್ರಶಾಂತ್ ಕುಮಾರ್ ಶೆಟ್ಟಿ ಗುತ್ತುಮನೆ, ನೀರೆ ಬೈಲೂರು ಲಯನ್ಸ್ ಕ್ಲಬ್ ಅಧ್ಯಕ್ಷ ಭಾಸ್ಕರ್ ಶೆಟ್ಟಿ, ಕಾರ್ಯದರ್ಶಿ ನೆಲ್ಸನ್ ಮಚಾದೋ, ಕೋಶಾಧಿಕಾರಿ ರಾಜೇಶ್ ಶೆಟ್ಟಿ, ಸದಸ್ಯರಾದ ನ್ಯಾಯವಾದಿ ಸದಾನಂದ ಸಾಲಿಯಾನ್, ಉದಯ ಕುಮಾರ್ ಹೆಗ್ಡೆ, ಗುರುಪ್ರಸಾದ್ ಶೆಟ್ಟಿ, ಸತೀಶ್ ಶೆಟ್ಟಿ ಸಂಭ್ರಮ, ದಿಲೀಪ್ ಶೆಟ್ಟಿ, ಸುರೇಶ್ ಶೆಟ್ಟಿ ಸಾಯಿರಾಮ್, ಬೈಲೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಾದ ಸೀತಾರಾಮ್ ಭಟ್, ದೈಹಿಕ ಶಿಕ್ಷಣ ಶಿಕ್ಷಕರಾದ ಫೆಡ್ರಿಕ್ ಹಾಗೂ ಶಾಲಾ ವಿದ್ಯಾರ್ಥಿಗಳು, ಮತ್ತಿತರರು ಉಪಸ್ಥಿತರಿದ್ದರು.



