ಕಾರ್ಕಳ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಭೇಟಿ

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯ ಕಾರಣ ಕಾರ್ಕಳ ತಾಲೂಕು ರೆಂಜಾಳ ಗ್ರಾಮದ ಹೆರ್ಮೆ ಪ್ರದೇಶದಲ್ಲಿ ನಡೆದ ಭೂಕುಸಿತ ಸ್ಥಳಕ್ಕೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಕಾಂಗ್ರೆಸ್ ನಿಯೋಗವು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿತು.

ಭೂಕುಸಿತದ ವ್ಯಾಪ್ತಿಗೆ ಒಳಪಡುವ ಪರಿಸರದ ಮನೆಗಳನ್ನು ಸ್ಥಳಾಂತರಿಸುವ ಕೆಲಸ ಈಗಾಗಲೆ ನಡೆದಿದ್ದು ಇನ್ನೂ ಸ್ಥಳಾಂತರದ ಅಗತ್ಯವಿದ್ದರೆ ಅಂತಹ ಮನೆಗಳಿಗೆ ವಸತಿಯನ್ನು ಕಲ್ಪಿಸಲು ಕಾಂಗ್ರೆಸ್ ಪಕ್ಷದ ವತಿಯ ನೆರವು ನೀಡುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಸ್ಥಳಿಯ ಮುಖಂಡ ಭೂ‌ನ್ಯಾಯ ಮಂಡಳಿ ಸದಸ್ಯ ರಮೇಶ್ ಶೆಟ್ಟಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಕೆ.ಎಂ.ಎಫ್. ನಿರ್ದೇಶಕ ಸುಧಾಕರ್ ಶೆಟ್ಟಿ, ಪುರಸಭೆಯ ಮಾಜಿ ಸದಸ್ಯ ವಿವೇಕ್ ಶೆಣೈ, ಸಂದೇಶ್ ಜೈನ್, ಉಪಸ್ಥಿತರಿದ್ದರು.

Related posts

ಸೆಪ್ಟೆಂಬರ್ 20: .ಉಡುಪಿಯಲ್ಲಿ ಕೇರಳ ಕಲ್ಚರಲ್ ಅಂಡ್ ಸೋಶಿಯಲ್ ಸೆಂಟರ್ (ರಿ)ವತಿಯಿಂದ ಓಣಂ ಆಚರಣೆ

Madhyama Bimba

ವಿಶೇಷ ಠೇವಣಿ ಯೊಜನೆಯ ಮೂಲಕ ಒಂದೇ ತಿಂಗಳಲ್ಲಿ 2.76 ಕೋಟಿ ಸಂಗ್ರಹ

Madhyama Bimba

ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ವರಮಹಾಲಕ್ಷ್ಮೀ ವೃತ ಪೂಜೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More