ಕಾರ್ಕಳಹೆಬ್ರಿ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಬಾಟಲ್ ಬೂತ್ ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಬಜಗೋಳಿ ಬಸ್ಸು ನಿಲ್ದಾಣದ ಪರಿಸರದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಬಾಟಲ್ ಬೂತ್‌ನ್ನು ಮುಡಾರು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಯಿತು.


ಈ ಸಮಾರಂಭದಲ್ಲಿ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯ ಮಾರ್ಗದರ್ಶಕರಾದ ರೊ. ಡಾ. ಭರತೇಶ ಆದಿರಾಜ್, ರೊ. ಮಂಜುನಾಥ್ ಹೆಗ್ಡೆ, ಉಡುಪಿ ಜಿಲ್ಲಾ ಎಸ್‌ಎಲ್‌ಆರ್‌ಎಂ ಮೇಲ್ವಿಚಾರಕರು ಹಾಗೂ ಉಡುಪಿ ಜಿಲ್ಲಾ ಎಸ್‌ಎಲ್‌ಆರ್‌ಎಂ ಕಾರ್ಯಕರ್ತರ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ರೊ.ಮಾಧವಿ. ಕೆ. ಇವರ ನೇತೃತ್ವದಲ್ಲಿ ಈ ಸ್ವಚ್ಛತಾ ಘಟಕವನ್ನು ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಶ್ವನಾಥರಿಗೆ ಹಸ್ತಾಂತರಿಸಿ ಬಸ್ ನಿಲ್ದಾಣದಲ್ಲಿ ಅಳವಡಿಸಲಾಯಿತು.

ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ (ಗ್ರಾಮೀಣ ಉದ್ಯೋಗ) ರಮೇಶ್ ಎಸ್, ನಿಕಟಪೂರ್ವ ಅಧ್ಯಕ್ಷ ಸುರೇಶ್ ಶೆಟ್ಟಿ, ಶ್ರೀಮತಿ ಶ್ರುತಿ ಡಿ.ಅಧಿಕಾರಿ, ಸದಸ್ಯರಾದ ಪ್ರಶಾಂತ್ ಪೂಜಾರಿ, ಗ್ರಾಮ ಪಂಚಾಯತ್ ಸಿಬ್ಬಂದಿ, ಎಸ್‌ಎಲ್‌ಆರ್‌ಎಂ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಇದರ ನಿಕಟಪೂರ್ವ ಅಧ್ಯಕ್ಷರಾದ ರೊ.ಸುರೇಂದ್ರ ನಾಯಕ್, ಪೂರ್ವ ಅಧ್ಯಕ್ಷರಾದ ರೊ. ಉಪೇಂದ್ರ ವಾಗ್ಲೆ, ಕ್ಲಬ್‌ನ ಐಟಿ ಚೇರ್‌ಮೆನ್ ರೊ.ಶ್ರೀವರ್ಮ ಅಜ್ರಿ, ಕಾರ್ಯದರ್ಶಿ ರೊ. ಗಣೇಶ ಬರ್ಲಾಯ ಭಾಗವಹಿಸಿದ್ದರು.

Related posts

ದೇಶದ ಅಭಿವೃದ್ಧಿಯಲ್ಲಿ ಸಿವಿಲ್ ಎಂಜಿನಿಯರ್‌ಗಳ ಕೊಡುಗೆ ಅಪಾರ: ಎನ್.ಎಂ. ಹೆಗ್ಡೆ

Madhyama Bimba

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಉಡುಪಿ ಜಿಲ್ಲೆಯ ಪೂರ್ವಿ ಶೆಟ್ಟಿ 3 ಚಿನ್ನ ಹಾಗೂ 1 ಬೆಳ್ಳಿಯ ಪದಕ

Madhyama Bimba

ಶಿರ್ಲಾಲಿನಲ್ಲಿ ಆ. 16ರಂದು ದ್ವಿತೀಯ ವರ್ಷದ ಕುಣಿತ ಭಜನಾ ಸ್ಪರ್ಧೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More