ಕಾರ್ಕಳ: ಜೋಡುರಸ್ತೆಯ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಕಟ್ಟಡ ಸಹಕಾರ ಸಿಂಧೂರ ಕಾಂಪ್ಲೆಕ್ಸ್‌ನ ಕೆಳ ಮಹಡಿ ಮತ್ತು ಎರಡನೇ ಮಹಡಿಯಲ್ಲಿ ಎನ್‌ಪಿ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ಸ್ ಮಳಿಗೆಯು ಆ.14ರಂದು ಶುಭಾರಂಭಗೊಳ್ಳಲಿದೆ.
ಗ್ರಾಹಕರ ಅನುಕೂಲತೆಗೆ ತಕ್ಕ ಹಾಗೆ ಒಂದೇ ಸೂರಿನಡಿ ಎಲ್ಲಾ ಗೃಹೋಪಯೋಗಿ ಉತ್ಪನ್ನಗಳು ಲಭ್ಯವಿದ್ದು, ಉದ್ಘಾಟನೆಯ ಪ್ರಯುಕ್ತ ಗ್ರಾಹಕರು ಖರೀದಿಸುವ ಉತ್ಪನ್ನಗಳ ಮೇಲೆ ವಿಶೇಷ ಆಫರ್ ನೀಡಲಾಗುತ್ತಿದೆ. ಈ ಆಫರ್‌ಗಳು ಆ.14ರಿಂದ ಆ. 25ರವರೆಗೆ ನಡೆಯಲಿದೆ.
ನೂತನ ಉದ್ಯಮದ ಉದ್ಘಾಟನಾ ಕಾರ್ಯಕ್ರಮವು ಬೆಳಿಗ್ಗೆ 11.00ಗಂಟೆಗೆ ನಡೆಯಲಿದ್ದು, ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ. ರಾಜಾಪುರ ಸಾರಸ್ವತ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ರವೀಂದ್ರ ಪ್ರಭು ಕಡಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ರಘುಪತಿ ಭಟ್ ಕೆಳ ಮಹಡಿ ಮಳಿಗೆಯನ್ನು ಉದ್ಘಾಟಿಸಲಿದ್ದು, ಎರಡನೇ ಮಹಡಿ ಮಳಿಗೆಯನ್ನು ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಉದಯ ಶೆಟ್ಟಿ ಮುನಿಯಾಲು ಉದ್ಘಾಟಿಸಲಿದ್ದಾರೆ. ಕಾರ್ಕಳ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರಾದ ಅಶ್ವತ್ ಎಸ್.ಎಲ್ ವೆಬ್ ಸೈಟ್ ಅನಾವರಣಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ, ಫೆಡರೇಷನ್ ಆಫ್ ಕರ್ನಾಟಕ ರಾಜ್ಯ ಕ್ವಾರಿ ಆಂಡ್ ಕ್ರಷರ್‍ಸ್ ಓನರ್‍ಸ್ ಅಸೋಸಿಯೇಶನ್‌ನ ರಾಜ್ಯಾಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ ಬಜಗೋಳಿ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಪ್ರಸನ್ನ ಕುಮಾರ್, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ವಿಕ್ರಂ ಹೆಗ್ಡೆ ಕಣಂಜಾರು, ಕಾರ್ಕಳ ಬಿಲ್ಲವ ಸಮಾಜ ಸಂಘದ ಅಧ್ಯಕ್ಷರಾದ ಪ್ರಮಲ್ ಕುಮಾರ್, ಜೋಡುರಸ್ತೆ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಂತೋಷ್ ರಾವ್, ಕಾರ್ಕಳ ಜಾನ್ಸ್ ಸ್ಪೋರ್ಟ್ಸ್ ಅಕಾಡೆಮಿ ಅಧ್ಯಕ್ಷರಾದ ಜಾನ್ ಡಿ’ಸಿಲ್ವಾ ಭಾಗವಹಿಸಲಿದ್ದಾರೆ.
