ಕಾರ್ಕಳ

ಕುಕ್ಕುಂದೂರು ಫ್ರೆಂಡ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ಹಾಗೂ ವನಮಹೋತ್ಸವ

 

ಕುಕ್ಕುಂದೂರು ಫ್ರೆಂಡ್ಸ್ (ರಿ.) ಕುಕ್ಕುಂದೂರು-ಮುಂಬೈ ಸಂಘದ ಸದಸ್ಯರು ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಂದೂರು ಇಲ್ಲಿನ ಶಾಲೆಯ ಮಕ್ಕಳೊಂದಿಗೆ ೮೦ನೇ ಸ್ವಾತಂತ್ರ್ಯೋತ್ಸವ ಆಚರಿಸಿದರು. ಬಳಿಕ ಸಂಘದ ವತಿಯಿಂದ ಗಿಡಗಳನ್ನು ನೆಟ್ಟು ೧೭ನೇ ವರ್ಷದ ವನಮಹೋತ್ಸವ ಆಚರಿಸಲಾಯಿತು.

ಸಂಘವು ಕಳೆದ 17 ವರ್ಷಗಳಿಂದ ಪರಿಸರ ಸಂರಕ್ಷಣೆ ಮತ್ತು ಹಸಿರು ಪರಿಸರ ನಿರ್ಮಾಣದ ಸಂದೇಶ ಸಾರುವ ಉದ್ದೇಶದಿಂದ ವನಮಹೋತ್ಸವ ಆಚರಿಸುತ್ತಿದೆ. ಈವರೆಗೆ ಸ್ಥಳೀಯವಾಗಿ ೨೦೦ಕ್ಕೂ ಅಧಿಕ ವಿವಿಧ ಬಗೆಯ ಗಿಡಗಳನ್ನು ನೆಟ್ಟು ಪೋಷಿಸಲಾಗುತ್ತಿದೆ.

ದೇಶಭಕ್ತಿ, ಪರಿಸರ ಪ್ರೀತಿ ಮತ್ತು ಸಾಮಾಜಿಕ ಬದ್ಧತೆಯ ಸಂದೇಶದೊಂದಿಗೆ ಸ್ವಾತಂತ್ರ್ಯೋತ್ಸವದ ಸಂಭ್ರಮದ ಜೊತೆಗೆ ಪ್ರಕೃತಿ ಸಂರಕ್ಷಣೆಯ ಮಹತ್ವವನ್ನು ಜನರಲ್ಲಿ ಮೂಡಿಸುವ ಉದ್ದೇಶವನ್ನು ಇಟ್ಟು ಈ ಕಾರ್ಯಕ್ರಮ ನಡೆಸಲಾಗುತ್ತಿದೆ.

ಕುಕ್ಕುಂದೂರು ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕರಾದ ರಾಜೇಂದ್ರ ಮುದ್ಯ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಜಾತಾ ಎನ್. ರಾಜ್, ಸ್ಥಳೀಯ ಉದ್ಯಮಿ ಕಮಲಾಕ್ಷ ನಾಯಕ್ ಶಾಂತೇರಿ ಕಾಮಾಕ್ಷಿ, ಸಂಘದ ಗೌರವಾಧ್ಯಕ್ಷರಾದ ತ್ರಿವಿಕ್ರಮ ಕಿಣಿ, ಅಧ್ಯಕ್ಷರಾದ ಶ್ರೀಮತಿ ಪುಷ್ಪಾ ಪ್ರಭು, ಉಪಾಧ್ಯಕ್ಷರಾದ ಶ್ರೀಮತಿ ಲಲಿತಾ ಶೆಟ್ಟಿ, ಶಾಲೆಯ ಅಧ್ಯಾಪಕ ವೃಂದದವರು, ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯರು ಭಾಗವಹಿಸಿದ್ದರು.

Related posts

ಎಸ್‌ವಿಟಿ: ರ್‍ಯಾಂಕ್ ವಿಜೇತರಿಗೆ ಅಭಿನಂದನಾ ಸಮಾರಂಭ

Madhyama Bimba

ಕ್ರೈಸ್ಟ್‌ಕಿಂಗ್: ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳಿಗೆ ಚಾಲನೆ ಮತ್ತು ತರಬೇತಿ ಕಾರ್ಯಕ್ರಮ

Madhyama Bimba

ಕಾಂಗ್ರೆಸಿನವರ ಪೋಸ್ಟರ್ ಅಭಿಯಾನಕ್ಕೆ ಪೊಲೀಸರಿಂದ ತಡೆ – ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು- ಶಾಸಕರ ಕಚೇರಿಯಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More