ಕಾರ್ಕಳ

ಎಸ್.ವಿ.ಟಿ: 80ನೇ ಸ್ವಾತಂತ್ರ್ಯ ದಿನಾಚರಣೆ

ಎಸ್.ವಿ.ಟಿ. ವಿದ್ಯಾ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಎಸ್.ವಿ. ಎಜ್ಯುಕೇಶನ್ ಟ್ರಸ್ಟ್ (ರಿ.) ಕಾರ್ಕಳದ ಉಪಾಧ್ಯಕ್ಷರಾದ ಕಾರ್ಕಳ ಕಮಲಾಕ್ಷ ಕಾಮತ್ ಧ್ವಜಾರೋಹಣ ನೆರವೇರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿ, ವಿದ್ಯಾರ್ಥಿಗಳು ಸುಸಂಸ್ಕೃತರಾಗಿ ದೇಶದ ಏಕತೆ ಮತ್ತು ಪ್ರಗತಿಗೆ ತಮ್ಮ ಕೊಡುಗೆ ನೀಡುವ ಸಂಕಲ್ಪ ಮಾಡಬೇಕು ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ.ಪಿ ಶೆಣೈ, ಕೋಶಾಧಿಕಾರಿ ಐ ರವೀಂದ್ರನಾಥ್ ಪೈ, ಸದಸ್ಯರಾದ ಶಿವಾನಂದ ಕಾಮತ್, ಪೂರ್ವ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷೆ ಶ್ರೀಮತಿ ಉಷಾ ಜೆ ಶೆಣೈ, ವಿದ್ಯಾ ಸಂಸ್ಥೆಗಳ ಪ್ರಾಚಾರ್ಯರು, ಹಿರಿಯ ಸಹ ಶಿಕ್ಷಕರು, ಮುಖ್ಯೋಪಾಧ್ಯಾಯರು, ಉಪನ್ಯಾಸಕರು, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಶ್ರೀಮತಿ ಜ್ಯೋತಿ ಪಾಠಕ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

Related posts

ಕೆರ್ವಾಶೆಯಲ್ಲಿ ಆ. 09ರಂದು ಆಟಿಡೊಂಜಿ ಕೆಸರ್ದ ಕೂಟ

Madhyama Bimba

ಇನ್ನಾ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಲೇಖನ ಸಾಮಾಗ್ರಿ, ಬ್ಯಾಗ್, ಕೊಡೆ ಮತ್ತು ಸಮವಸ್ತ್ರ ವಿತರಣೆ

Madhyama Bimba

ವಿದ್ಯಾರ್ಜನೆಯಲ್ಲಿ ಹಠ ಸಾಧಿಸುವವರಾಗಬೇಕು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More