ಕಾರ್ಕಳಹೆಬ್ರಿ

ಪಡುಕುಡೂರು 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

ಹೆಬ್ರಿ : ಪಡುಕುಡೂರಿನಲ್ಲಿ ಎಂ.ಡಿ. ಅಧಿಕಾರಿ ಯೂತ್ ಕ್ಲಬ್ ಮತ್ತು ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ನಡೆದ ೮೦ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಪ್ರಯುಕ್ತ ಸ್ವಾತಂತ್ರ್ಯ ಹೋರಾಟಗಾರ ಪಡುಕುಡೂರು ಬೀಡು ಎಂ.ಡಿ. ಅಧಿಕಾರಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

ಪಡುಕುಡೂರು ಕಂಬಳಮನೆ ಸುಧಾಕರ ಶೆಟ್ಟಿ ಮಾಲಾರ್ಪಣೆ ಮಾಡಿದರು. ಶಾಲೆಯ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಭಾರವಿ ಶೆಟ್ಟಿ ಪಟೇಲರ ಮನೆ ಧ್ವಜಾರೋಹಣ ನೆರವೇರಿಸಿದರು.

ಬಳಿಕ ಶಾಲೆಯಲ್ಲಿ ಛದ್ಮವೇಷ ಸ್ಪರ್ಧೆ, ದೇಶಭಕ್ತಿ ಗೀತೆಯ ಸಹಿತ ವಿವಿಧ ಸ್ಪರ್ಧೆ, ಸಾಂಸ್ಕೃತಿಕ ಸಂಭ್ರಮ ನಡೆಯಿತು.

ಸ್ವಾತಂತ್ರ್ಯ ಸೇನಾನಿಗಳ ವೇಷ ಧರಿಸಿದ ಶಾಲಾ ಮಕ್ಕಳು ಎಲ್ಲರ ಗಮನ ಸೆಳೆದರು.
ಬ್ಯಾಂಡ್ ವಾದನ ಜೊತೆಗೆ ಶಾಲಾ ಮಕ್ಕಳು ಗಣ್ಯರು ಸೇರಿ ಎಲ್ಲರೂ ಮೆರವಣಿಗೆಯಲ್ಲಿ ತೆರಳಿ ಎಂ.ಡಿ.ಅಧಿಕಾರಿ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಪ್ರಮುಖರಾದ ಪಡುಕುಡೂರು ಪಡುಪರ್ಕಳ ಶಂಕರ ಶೆಟ್ಟಿ, ಹರೀಶ್ ಶೆಟ್ಟಿ ಪಡುಪರ್ಕಳ, ಜಗದೀಶ ಹೆಗ್ಡೆ, ಶಂಕರ ಶೆಟ್ಟಿ ಮುನಿಯಾಲು,ಅಶೋಕ್ ಎಂ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಶೆಟ್ಟಿ, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಭಾರವಿ ಶೆಟ್ಟಿ, ಸಂಚಾಲಕ ಪ್ರಸನ್ನ ಶೆಟ್ಟಿ, ಮುಖ್ಯ ಶಿಕ್ಷಕ ಹರೀಶ್ ಪೂಜಾರಿ, ಎಂ.ಡಿ.ಅಧಿಕಾರಿ ಯೂತ್ ಕ್ಲಬ್ ಅಧ್ಯಕ್ಷ ಸಂದೀಪ್ ಶೆಟ್ಟಿ, ಶಿಕ್ಷಕರು, ವಿವಿಧ ಸಂಸ್ಥೆಗಳ ಪ್ರಮುಖರು,ಶಾಲಾಭಿವೃದ್ಧಿ ಸಮಿತಿ, ಶತಮಾನೋತ್ಸವ ಸಮಿತಿಯ ಸದಸ್ಯರು, ಪದಾಧಿಕಾರಿಗಳು, ಊರಿನ ಗಣ್ಯರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಹರೀಶ ಪೂಜಾರಿ ನಿರೂಪಿಸಿ ಸ್ವಾಗತಿಸಿದರು.

 

Related posts

ಕಾರ್ಕಳ ಜ್ಞಾನಸುಧಾ: ಹದಿಹರೆಯದ ಬಗ್ಗೆ ಜಾಗೃತಿ ಕಾರ್ಯಕ್ರಮ

Madhyama Bimba

ಸಂಕಲಕರಿಯ ಪರಿಸರದಲ್ಲಿ ಚಿರತೆ ಹಾವಳಿ- ಆತಂಕದಲ್ಲಿ ಗ್ರಾಮಸ್ಥರು

Madhyama Bimba

ಕಾರ್ಕಳ: ಕ್ಷಯಮುಕ್ತ ಭಾರತ ಅಭಿಯಾನ – ಆರೋಗ್ಯ ತಪಾಸಣಾ ಶಿಬಿರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More