ಕಾರ್ಕಳ

ಸೂರಾಲು: 80ನೇ ಸ್ವಾತಂತ್ರ್ಯ ದಿನಾಚರಣೆ-ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ವಿತರಣೆ

ಕಾರ್ಕಳ: ಸೂರಾಲು ಗುಂಡಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಉಮೇಶ್ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾರ್ಕಳ ತಾಲೂಕು ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷರಾದ ನ್ಯಾಯವಾದಿ ಸದಾನಂದ ಸಾಲಿಯಾನ್ ಅವರು ಧ್ವಜಾರೋಹಣವನ್ನು ನೆರವೇರಿಸಿ ಶುಭ ಹಾರೈಸಿದರು.

ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ತಾರಾನಾಥ್ ಕೋಟ್ಯಾನ್, ಸೂರಾಲು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಸುಧಾಕರ್ ಎಂ ಶೆಟ್ಟಿ, ಉದ್ಯಮಿ ಜಯಪ್ರಕಾಶ್ ದೇವಾಡಿಗ, ಆಟೋರಿಕ್ಷಾ ಚಾಲಕ ಮಾಲಕರ ಸಂಘದ ಸಂಘಟನಾ ಕಾರ್ಯದರ್ಶಿ ಸಂತೋಷ್ ರಾವ್, ಗ್ರಾ.ಪಂ.ಮಾಜಿ ಅಧ್ಯಕ್ಷೆ ರಾಜೇಶ್ವರಿ ರಾವ್, ಪ್ರಮುಖರಾದ ಶಿವಾನಂದ ಪೂಜಾರಿ, ಮಂಜುನಾಥ್ ಕೋಟ್ಯಾನ್, ಪ್ರಕಾಶ್ ರಾವ್, ಸುಭಾಷ್ ಪೂಜಾರಿ, ಮಂಜುನಾಥ್ ನಾಯಕ್, ಸುನೀತಾ ಸತೀಶ್, ಮೋನಿಕಾ ಮುಂತಾದವರು ಉಪಸ್ಥಿತರಿದ್ದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸೂರಾಲು ಗ್ರಾಮಸೇವಾ ಟ್ರಸ್ಟ್ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ವಿತರಿಸಲಾಯಿತು.

ಸಭಾ ಕಾರ್ಯಕ್ರಮದ ನಂತರ ಶಾಲಾ ಮಕ್ಕಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.
ಶಾಲಾ ಮುಖ್ಯೊಪಾಧ್ಯಯರಾದ ಜಬೀನ ಇ. ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಸಹ ಶಿಕ್ಷಕಿ ಬೇಬಿ ಗೀತಾ ಬಹುಮಾನ ವಿಜೇತರ ಪಟ್ಟಿ ವಾಚಿಸಿ, ಕಾರ್ಯಕ್ರಮದ ಪ್ರಾಯೋಜಕರಿಗೆ ಕೃತಜ್ಞತೆ ಸಲ್ಲಿಸಿದರು.

ಸಹ ಶಿಕ್ಷಕರಾದ ಸ್ವಾತಿ ಜೈನ್ ಕಾರ್ಯಕ್ರಮ ನಿರೂಪಿಸಿ, ವಿದ್ಯಾ ವಂದಿಸಿದರು.

Related posts

ಕೈಸ್ಟ್‌ಕಿಂಗ್: ಕರಾಟೆಯಲ್ಲಿ ಸುದೀಕ್ಷಾ ಪೂಜಾರಿ ಮತ್ತು ಅಕ್ಷಯ್ ಪ್ರಭು ಜಿಲ್ಲಾ ಮಟ್ಟಕ್ಕೆ ಆಯ್ಕೆ

Madhyama Bimba

ಬೆಳ್ಮಣ್ಣು ವ್ಯವಸಾಯ ಸಹಕಾರಿ ಸಂಘದಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರೇಮ ಶೆಟ್ಟಿಯವರಿಗೆ ಸನ್ಮಾನ

Madhyama Bimba

114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕಿನಿಂದ 1,535 ಕೋಟಿ ರೂಪಾಯಿ ವ್ಯವಹಾರ ; 22 ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More