ಸರಕಾರಿ ಪದವಿ ಪೂರ್ವ ಕಾಲೇಜು, ಪಳ್ಳಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಸಿಬಿಸಿ ಅಧ್ಯಕ್ಷರಾದ ಜಗದೀಶ್ ಹೆಗ್ಡೆ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಊರಿನ ಗಣ್ಯರು, ಸಿಬಿಸಿ ಯ ಸರ್ವ ಸದಸ್ಯರು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು, ಉಪನ್ಯಾಸಕರು, ಅಧ್ಯಾಪಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಧ್ವಜಾರೋಹಣದ ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಗದೀಶ್ ಹೆಗ್ಡೆ ರವರು ವಹಿಸಿ ತಮ್ಮ ಕುಟುಂಬದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.
ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಮಹಮ್ಮದ್ ರಿಯಾಜ್ ಅವರು ಸ್ವಾತಂತ್ರ್ಯ ಹೋರಾಟಗಾರರ ಕುರಿತು ಹಾಗೂ ವಿಶೇಷವಾಗಿ ಕರಾವಳಿ ಭಾಗದ ತುಳುನಾಡಿನ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಹೋರಾಟ ಮತ್ತು ದೇಶಪ್ರೇಮದ ಕುರಿತು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸ್ವಾತಂತ್ರ್ಯದ ಮಹತ್ವದ ಅರಿವು ಮೂಡಿಸಿದರು.
ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ, ಭಾಷಣ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ವಿದ್ಯಾರ್ಥಿಗಳು ‘ರಾಣಿ ಅಬ್ಬಕ್ಕ’ ನಾಟಕವನ್ನು ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ದಾನಿಗಳಾದ ವಿಶ್ವರಾಜ್ ಹೆಗ್ಡೆ, ಪಳ್ಳಿ ಮತ್ತು ಶ್ರೀಮತಿ ಪುಷ್ಪ ಈ ಸಂದರ್ಭದಲ್ಲಿದ್ದರು.
ಕಂಪ್ಯೂಟರ್ ಶಿಕ್ಷಕರಾದ ನಿತಿನ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಮಂಜಪ್ಪ ಸ್ವಾಗತಿಸಿದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಜೇಶ್ ನಾಯಕ್ ಅವರು ಧನ್ಯವಾದ ಸಲ್ಲಿಸಿದರು.
