ದರೆಗುಡ್ಡೆ ಗ್ರಾಮದಲ್ಲಿ ಪ್ರಪ್ರಥಮ ಬಿಜೆಪಿ ಕಾರ್ಯಕರ್ತರಾಗಿ ಪಕ್ಷ ಸಂಘಟನೆ ನಡೆಸಿದ ದರೆಗುಡ್ಡೆ ಬಸದಿ ಬಳಿಯ ಜಿನದತ್ತ ಹೆಗ್ಡೆಯವರು ನಿಧನರಾದರು.
90 ವಯಸ್ಸುನವರಾಗಿದ್ದ ಅವರು ಪತ್ನಿ ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸುಮಾರು ಐದು ದಶಕಗಳ ಹಿಂದೆ, ಕಾಂಗ್ರೆಸ್ ಪಕ್ಷದ ಪ್ರಭಾವ ಪ್ರಬಲವಾಗಿದ್ದ ಕಾಲದಲ್ಲಿ ದರೆಗುಡ್ಡೆ ಹಾಗೂ ಮೂಡಬಿದ್ರಿ ಪರಿಸರದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರೇ ಇಲ್ಲದಂತಹ ಸಂದರ್ಭದಲ್ಲಿ, ಪಕ್ಷದ ಸಿದ್ಧಾಂತವನ್ನು ಜನರಿಗೆ ಪರಿಚಯಿಸುವ ಕೆಲಸ ಅವರು ನಡೆಸಿದ್ದರು.
ಅವರ ನಿಧನಕ್ಕೆ ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕ ಉಮನಾಥ್ ಎ ಕೋಟ್ಯಾನ್, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಮಂಡಲ ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ, ಹಿಂದು ಜಾಗರಣ ವೇದಿಕೆ ಮುಖಂಡ ಸಮಿತ್ ರಾಜ್ ದರೆಗುಡ್ಡೆ, ದರೆಗುಡ್ಡೆ ಗ್ರಾಮ ಪಂಚಾಯತು ಮಾಜಿ ಅಧ್ಯಕ್ಷ ಅಶೋಕ್ ಶೆಟ್ಟಿ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ದರೆಗುಡ್ಡೆ ಮತ್ತು ಮೂಡಬಿದ್ರಿ ಪರಿಸರದ ಗಣ್ಯರು ಸಂತಾಪ ಸೂಚಿಸಿದ್ದಾರೆ.
