ಶಿರ್ವದ ಡೇವಿಡ್ ಡಿಸೋಜಾ ಅವರ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟ ಅನೂಜ್ ಪಾಟೀಲ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಇಂದು ಬೆಳಗ್ಗೆ ಅನೂಜ್ ಪಾಟೀಲ್‌ನನ್ನು ಕುಂದಾಪುರ ಠಾಣೆಯ ಎಸ್‌ಐ ನಂಜ ನಾಯಕ್, ಕೊಲ್ಲೂರು ಠಾಣೆಯ ವಿನಯ್ ಹಾಗೂ ಸಿಬ್ಬಂದಿಗಳು ಕರೆ ತರುತ್ತಿದ್ದ ವೇಳೆ ಹೆಬ್ರಿ ಠಾಣಾ ವ್ಯಾಪ್ತಿಯಲ್ಲಿ ಆತ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭದಲ್ಲಿ ಕೊಲ್ಲೂರು ಠಾಣೆಯ ಪಿಎಸ್‌ಐ ವಿನಯ್‌ರವರ ಬಂದೂಕನ್ನು ಕಸಿದುಕೊಂಡು ಗುಂಡು ಹಾರಿಸುವ ಪ್ರಯತ್ನ ಮಾಡಿದ್ದಾನೆ ಎನ್ನಲಾಗಿದೆ. ತಕ್ಷಣ ಜಾಗೃತರಾದ ಕುಂದಾಪುರ ಠಾಣೆಯ ಪಿಎಸ್‌ಐ ನಂಜ ನಾಯಕ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.
ಈ ವ್ಯಕ್ತಿ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಕ್ರಿಮಿನಲ್ ಹಿನ್ನಲೆಯುಳ್ಳ ವ್ಯಕ್ತಿಯಾಗಿದ್ದಾನೆ ಎಂದು ತಿಳಿದುಬಂದಿದೆ.
