ಮೂಡುಬಿದಿರೆ

ಎಕ್ಸಲೆಂಟ್ ಶಾಲೆಗೆ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಾಂಪಿಯನ್ ಪಟ್ಟ

ಮೂಡುಬಿದಿರೆ: ಎಕ್ಸಲೆಂಟ್‌ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ಮೂಡುಬಿದಿರೆಯ ಕನ್ನಡ ಭವನದಲ್ಲಿ ನಡೆದ ರಾಜ್ಯಮಟ್ಟದ ವಿವಿಧ ವಿಭಾಗಗಳ ಕರಾಟೆ ಸ್ಪರ್ಧೆಯಲ್ಲಿ ಅಮೋಘ ಪ್ರದರ್ಶನ ನೀಡುವುದರೊಂದಿಗೆ ಹಲವು ಬಹುಮಾನಗಳನ್ನು ಗಳಿಸಿ ಚಾಂಪಿಯನ್ ಪಟ್ಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ವಿವಿಧ ವಿಭಾಗಗಳಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ ಒಟ್ಟು ೮ ಚಿನ್ನದ ಪದಕ, ೭ ಬೆಳ್ಳಿ ಪದಕ ಮತ್ತು ೪ ಕಂಚಿನ ಪದಕಗಳಿಗೆ ಎಕ್ಸಲೆಂಟ್ ಶಾಲೆಯ ವಿದ್ಯಾರ್ಥಿಗಳು ಭಾಜನರಾಗಿದ್ದಾರೆ.

ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಯುವರಾಜ್‌ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಆಡಳಿತ ನಿರ್ದೇಶಕ ಡಾ.ಬಿ.ಪಿ. ಸಂಪತ್‌ಕುಮಾರ್, ಶೈಕ್ಷಣಿಕ ನಿರ್ದೇಶಕ ಪುಷ್ಪರಾಜ್, ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಹಾರೈಸಿದರು

Related posts

ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯ

Madhyama Bimba

ಮಹಾವೀರ ಪದವಿ ಪೂರ್ವ ಕಾಲೇಜಿನಲ್ಲಿ ನೋಟ್ ಬುಕ್ ವಿತರಣಾ ಕಾರ್ಯಕ್ರಮ

Madhyama Bimba

ವಾಣಿ ವಿಲಾಸ ಶಾಲೆಯಲ್ಲಿ ಪರಿಸರ ದಿನ ಆಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More