ಕಾರ್ಕಳಮೂಡುಬಿದಿರೆಹೆಬ್ರಿ

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸ್ಶೆಟಿಗೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಸಾಧನಾ ಪ್ರಶಸ್ತಿ

 

ರಾಜ್ಯದ ಅಗ್ರಗಣ್ಯ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲಿ ಒಂದಾಗಿರುವ ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯು 2025-26ನೇ ಸಾಲಿನಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಜಿಲ್ಲೆಯ ಅತ್ಯುತ್ತಮ ಕ್ರೆಡಿಟ್‌ಕೋ-ಓಪರೇಟಿವ್ ಸೊಸೈಟಿ ಎಂದು ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನವರು ಗುರುತಿಸಿ ಆ.22ರಂದು ಜರಗಿದ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಂಘಕ್ಕೆ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರಕುಮಾರ್‌ರವರು, ಉಭಯ ಜಿಲ್ಲೆಗಳಾದ ದ.ಕ. ಮತ್ತು ಉಡುಪಿ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕರುಗಳಾದ ಎಚ್. ಎನ್. ರಮೇಶ್ ಮತ್ತು ಶ್ರೀಮತಿ ಲಾವಣ್ಯ ಕೆ. ಆರ್., ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಸರ್ವ ನಿರ್ದೇಶಕರುಗಳು, ದ. ಕ. ಮತ್ತು ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷರುಗಳು, ಸಂಘದ ನಿರ್ದೇಶಕರಾದ ದಯಾಕರ ಆಳ್ವರವರ ಸಮಕ್ಷಮದಲ್ಲಿ ಸಂಘದ ಅಧ್ಯಕ್ಷರಾದ ಕೆ. ಜೈರಾಜ್ ಬಿ. ರೈಯವರಿಗೆ ಹಾಗೂ ಮಹಾಪ್ರಬಂಧಕ ಗಣೇಶ್ ಜಿ.ಕೆ.ಯವರಿಗೆ ಸಾಧನಾ ಪ್ರಶಸ್ತಿ ಪ್ರದಾನ ಮಾಡಿದರು.

ಸಂಘಕ್ಕೆ ಈ ಪ್ರಶಸ್ತಿಯು ಕಳೆದ 10 ವರ್ಷಗಳಿಂದ ಸತತವಾಗಿ ಹಾಗೂ ಒಟ್ಟು 15ನೇ ಬಾರಿಗೆ ಲಭಿಸಿರುವುದು ದಾಖಲೆಯಾಗಿದೆ.

Related posts

ಮುಂಡ್ಕೂರು ಬಳಿ ಅಕ್ರಮ ಮರಳು ಸಾಗಾಟ

Madhyama Bimba

ಮಾರೂರು – ಹೊಸಂಗಡಿ ದೇವಸ್ಥಾನದ ಜೀರ್ಣೋದ್ಧಾರದ ಕಾರ್ಯಕ್ಕೆ 5 ಲಕ್ಷ ರೂ. ಚೆಕ್ ಹಸ್ತಾಂತರ

Madhyama Bimba

ನೆಲ್ಲಿಕಾರು ವಿಶ್ವಕರ್ಮ ಸಂಘದಲ್ಲಿ ವರಮಹಾಲಕ್ಷ್ಮಿ ಪೂಜೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More