ಕಾರ್ಕಳಹೆಬ್ರಿ

ಕಲಾವಿದರಿಂದ ಅರ್ಜಿ ಆಹ್ವಾನ

ಕಲಾವಿದರ ವಿವರಗಳನ್ನು ಕ್ರೋಢಿಕರಿಸುವ ದೃಷ್ಟಿಯಿಂದ ಜಿಲ್ಲೆಯಲ್ಲಿನ ಕಲಾವಿದರ, ಕಲಾತಂಡಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಸೂಕ್ತ ಕಾರ್ಯಕ್ರಮಗಳನ್ನು ನೀಡಲು ಹಾಗೂ ನೈಜ ಕಲಾವಿದರ ಪಟ್ಟಿಯನ್ನು ತಯಾರಿಸಿ ಗುರುತಿನ ಚೀಟಿ ನೀಡಲು ಅರ್ಹ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಲಾವಿದರು, ಕಲಾತಂಡದವರು ಹಾಗೂ ಸಾಹಿತಿಗಳು ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯಿಂದ ನಿಗಧಿತ ಅರ್ಜಿ ನಮೂನೆಯನ್ನು ಪಡೆದು, ಸ್ವ-ವಿವರದ ಮಾಹಿತಿಯೊಂದಿಗೆ ತಮ್ಮ ಆಧಾರ್ ಗುರುತಿನ ಚೀಟಿ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಪ್ರತಿಷ್ಠಿತ ಸಂಘ ಸಂಸ್ಥೆಗಳಿಂದ ಪಡೆದ ಪ್ರಶಸ್ತಿ ಪುರಸ್ಕಾರಗಳ ವಿವರ, ಪ್ರಮುಖ ಪ್ರದರ್ಶನಗಳ ವಿವರ, ಶಿಲ್ಪಾ ಚಿತ್ರಕಲೆಗಳ ಕಲಾ ಪ್ರದರ್ಶನಗಳ ಛಾಯಾಚಿತ್ರಗಳನ್ನು ಲಗತ್ತಿಸಿ, ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟಂಬರ್ 30 ರ ಒಳಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಡಾ. ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಅಲೆವೂರು ಗ್ರಾಮ, ಮಣಿಪಾಲ ಅಂಚೆ, ಉಡುಪಿ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2986168 ಅನ್ನು ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಕಾರ್ಕಳ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು

Madhyama Bimba

ರಾ.ಹೆ. 169 : ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡದ ಇಲಾಖೆ- ಸಾಣೂರಿನಲ್ಲಿ ಸಾರ್ವಜನಿಕರಿಂದಲೇ ತಾತ್ಕಾಲಿಕ ತಂಗುದಾಣ ನಿರ್ಮಾಣ

Madhyama Bimba

ರಾಜ್ಯ ಅಥ್ಲೆಟಿಕ್ಸ್ ಕೂಟದಲ್ಲಿ ನಿಟ್ಟೆ ಕ್ರೀಡಾಪಟುಗಳ ಸಾಧನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More