ನೀರೆ ಬೈಲೂರು: ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಸಂಘದ ಶ್ರೇಷ್ಠ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜಿಲ್ಲಾ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್.ರಾಜೇಂದ್ರ ಕುಮಾರ್, ನಿರ್ದೇಶಕರು ಹಾಗೂ ಆಡಳಿತ ವರ್ಗದವರು ಈ ಪ್ರಶಸ್ತಿ ಪ್ರದಾನ ಮಾಡಿದರು.
ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನೀರೆ ರವೀಂದ್ರ ನಾಯಕ್, ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಂತೋಷ್ ನಾಯ್ಕ ಪ್ರಶಸ್ತಿ ಸ್ವೀಕರಿಸಿದರು.
