ಶ್ರೀ ರವಿಶಂಕರ್ ವಿದ್ಯಾಮಂದಿರ, ಕಾರ್ಕಳದಲ್ಲಿ ವರಮಹಾಲಕ್ಷ್ಮೀ ಪೂಜೆಯನ್ನು ಆಚರಿಸಲಾಯಿತು.
ಅರ್ಚಕರಾದ ದಿನೇಶ್ ಭಟ್ ಅವರ ನೇತೃತ್ವದಲ್ಲಿ ಪೂಜಾ ವಿಧಿ-ವಿಧಾನಗಳು ಭಕ್ತಿಪೂರ್ವಕವಾಗಿ ನೆರವೇರಿದವು.
ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಕಾಮತ್ ಉಪಸ್ಥಿತಿಯಲ್ಲಿ ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಹಾಗೂ ಪೋಷಕರು ಸಹ ಪೂಜೆಯಲ್ಲಿ ಭಾಗವಹಿಸಿದರು.
ಮಂತ್ರೋಚ್ಚಾರಣೆ, ದೀಪಾರಾಧನೆ ಹಾಗೂ ಮಹಾಮಂಗಳಾರತಿಯೊಂದಿಗೆ ಪೂಜಾ ಕಾರ್ಯಕ್ರಮವು ನೆರವೇರಿತು.
