ಬಂಟರ ಮಹಿಳಾ ಘಟಕ ಮೂಡುಬಿದಿರ ಮತ್ತು ಆಳ್ವಾಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ರಸ್ತೆ ಸುರಕ್ಷತೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಎ .ಜಿ. ಸೋನ್ಸ್ ಕೈಗಾರಿಕಾ ತರಬೇತಿ ಸಂಸ್ಥೆಯ ತರಬೇತಿ ಅಧಿಕಾರಿ ಲಯನ್ ಶಿವಪ್ರಸಾದ್ ಹೆಗ್ಡೆ ಕಣಂಜಾರು ಎಂಜೆಎಫ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿವ ಪ್ರಸಾದ್ ಹೆಗ್ಡೆ ನಮ್ಮ ಜೀವಕ್ಕಿಂತ ಅಮೂಲ್ಯವಾದದ್ದು ಯಾವುದೂ ಇಲ್ಲ. ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಮನೆಯಲ್ಲಿ ತಂದೆತಾಯಿಗಳು ತಮ್ಮ ಬರುವಿಕೆಯನ್ನು ಎದುರುನೋಡುತ್ತಿರುತ್ತಾರೆ, ರಸ್ತೆಯಲ್ಲಿ
ಯದ್ವತದ್ವ ವಾಹನ ಚಲಾಯಿಸಿ ಪ್ರಾಣಕ್ಕೆ ಕುತ್ತುಂಟಾಗಿ ಹೆತ್ತವರನ್ನು ಅನಾಥರನ್ನಾಗಿ ಮಾಡಬೇಡಿ ಎಂದು ಕಿವಿಮಾತು ಹೇಳಿದರು.
ಅಳ್ವಾಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಕುರಿಯನ್ ಅಧ್ಯಕ್ಷತೆ ವಹಿಸಿದ್ದರು.
ಬಂಟರ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಶೋಭಾ ಎಸ್. ಹೆಗ್ಡೆ ,ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಸುದೀಪ್ ಬುನ್ನನ್ ಮತ್ತು ವಸುಧಾ
ಭಟ್ ಉಪಸ್ಥಿತರಿದ್ದರು.
ಎನ್ ಎಸ್ ಎಸ್ ನ ಸ್ವಯಂಸೇವಕರಾದ ಬುಸ್ರಾ ಸ್ವಾಗತಿಸಿದರು. ಸ್ಟೆಪಿನೈ ವಂದಿಸಿದರು, ಜಬೀರ್ ಕಾರ್ಯಕ್ರಮ ನಿರೂಪಿಸಿದರು.
