ಕಾರ್ಕಳ: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಆ. 30ರಂದು ವರದಿಯಾಗಿದೆ.
ಕಲ್ಯಾ ಗ್ರಾಮದ ಕರುಣಾಕರ ಆರ್. ನಾಯ್ಕ್ (54) ಮೃತಪಟ್ಟವರು.
ಇವರು ಬಿ.ಪಿ. ಶುಗರ್ ಹಾಗೂ ಪಾರ್ಶವಾಯು ಖಾಯಿಲೆಯಿಂದ ಬಳಲುತ್ತಿದ್ದರು. ಆ. 08ರಂದು ಮುಂಜಾನೆ ಮನೆಯ ಮೆಟ್ಟಿಲಿನಿಂದ ಕಾಲು ಜಾರಿ ಕೆಳಗೆ ಬಿದ್ದು ತಲೆಗೆ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುತ್ತಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
