ಮೂಡುಬಿದಿರೆ: ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ವ್ಯವಸ್ಥೆ ರೂಪಿಸುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಪ್ರಸ್ತಾವನೆಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
