ಕಾರ್ಕಳ: ಮಂಗಳೂರು ಜೆಪ್ಪು ಮೋರ್ಗನ್ಸ್‌ಗೇಟ್‌ನಲ್ಲಿ ಕೇಂದ್ರ ಕಛೇರಿಯನ್ನು ಹೊಂದಿರುವ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ 7ನೇ ಶಾಖೆಯು ಮೂಡುಬಿದಿರೆಯಲ್ಲಿ ಸೆ. 06ರಂದು ಸರ್ಕಾರಿ ಆಸ್ಪತ್ರೆ ರಸ್ತೆಯ ಪ್ರಭು ಕಾಂಪ್ಲೆಕ್ಸ್‌ನ 1ನೇ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ.
ಈ ಕಾಯಕ್ರರ್ಮದಲ್ಲಿ ಮುಖ್ಯ ಅತಿಥಿಗಳಾಗಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ| ಎಂ. ಮೋಹನ್ ಆಳ್ವ, ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್, ಕರ್ನಾಟಕ ಸರಕಾರದ ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ, ಮೂಡುಬಿದಿರೆ ರಾಮಕ್ಷತ್ರಿಯ ಸಂಘದ ಅಧ್ಯಕ್ಷರಾದ ಪ್ರೇಮಾನಂದ ಕೆ.ಎಸ್. ಭಾಗವಹಿಸಲಿರುವರು.
ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಸರಕಾರದ ಮಾಜಿ ಸಚಿವರು ಹಾಗೂ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಜೆ. ಕೃಷ್ಣ ಪಾಲೇಮಾರ್ ವಹಿಸಲಿರುವರು. ಈ ಸಮಾರಂಭಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸಂಘದ ಅಧ್ಯಕ್ಷರಾದ ಜೆ. ಕೃಷ್ಣ ಪಾಲೇಮಾರ್ ವಿನಂತಿಸಿದ್ದಾರೆ.
