ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆ, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕರ ವಿಭಾಗದ 14ರ ವಯೋಮಿತಿಯ ಕ್ರಿಕೆಟ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಐವರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
೭ನೇ ತರಗತಿಯ ತಶ್ವಿನ್ ಪಿ ಪೂಜಾರಿ, ಅಶ್ಮಿತ್ ಎಸ್ ದೇವಾಡಿಗ ಹಾಗೂ 8ನೇ ತರಗತಿಯ ರಿಯಾಂಶ್ ಆರ್, ರಾಹುಲ್ ರಾವ್, ಡೇಲನ್ ಡಿಮೆಲ್ಲೊ ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದಾರೆ.
