ಕಾರ್ಕಳಹೆಬ್ರಿ

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನಲ್ಲಿ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು ಮಟ್ಟದ 14ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ 2026-27ನೇ ಸಾಲಿನ ಕಬಡ್ಡಿ ಪಂದ್ಯಾವಳಿಯು ಸೆ.10ರಂದು ಕಾರ್ಕಳದ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನಲ್ಲಿ ಜರುಗಿತು.

ಅತಿಥಿ ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರು, ಉಡುಪಿ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ರೆಫ್ರಿ ಬೋರ್ಡ್ ನ ಅಧ್ಯಕ್ಷರಾದ ಶಶಿಧರ್ ಶೆಟ್ಟಿ ಮಾತನಾಡಿ ಕ್ರಿಯೇಟಿವ್ ಸಂಸ್ಥೆಯ ಕಾರ್ಯ ವೈಖರಿಯನ್ನು ಶ್ಲಾಘಿಸಿದರು.

ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್ ತಮ್ಮ ಸ್ಪೂರ್ತಿದಾಯಕ ಮಾತುಗಳಿಂದ ಯುವ ಕಬಡ್ಡಿ ಪಟುಗಳನ್ನು ಹುರಿದುಂಬಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರಾದ ಚೇತನ್ ಹಾಗೂ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನ ಪ್ರಾಂಶುಪಾಲೆ ಅಕ್ಷತಾ ಶೆಣೈ ಉಪಸ್ಥಿತರಿದ್ದರು.

ರಾಜ್ಯ ಕಬಡ್ಡಿ ಅಸೋಸಿಯೇಶನ್ ನತೀರ್ಪುಗಾರರಾದ ಸಂತೋಷ್, ಪ್ರಶಾಂತ್ ಶೆಟ್ಟಿ, ಅಣ್ಣಪ್ಪ ಭಾಗವಹಿಸಿದ್ದರು. ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿರುವ ಸುಮಾರು ೮ ತಂಡಗಳು ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದರು.

ದಿನವಿಡೀ ನಡೆದ ರೋಮಾಂಚಕ ಪಂದ್ಯಗಳ ನಂತರ ಜಯಭೇರಿ ಸಾಧಿಸಿದ ಸುಮಾರು ನಲವತ್ತೆಂಟು ವಿಜೇತರಿಗೆ ಸಮಾರೋಪ ಸಮಾರಂಭದಲ್ಲಿ ಉಪಸ್ಥಿತರಿದ್ದ ಮುಖ್ಯ ಅತಿಥಿಗಳು ಹಾಗೂ ಸಂಸ್ಥೆಯ ಇನ್ನೋರ್ವ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ವಿಜೇತರಿಗೆ ಬಹುಮಾನ ವಿತರಿಸಿದರು.

Related posts

ವಿಕಾಸ ಉದ್ಯೋಗ ಸೇತು ಉದ್ಘಾಟನೆ

Madhyama Bimba

ಕ್ರಿಯೇಟಿವ್ ಕಾಲೇಜು ಕಾರ್ಕಳದಲ್ಲಿ ಮಾದಕ ವಸ್ತು ವಿರೋಧಿ ದಿನ ಹಾಗೂ ನಶಾ ಮುಕ್ತ ಭಾರತ ಅಭಿಯಾನ

Madhyama Bimba

ಶಿಲ್ಪಿ ಶ್ಯಾಮರಾಯ ಆಚಾರ್ಯರ ಧರ್ಮಪತ್ನಿ ಸುಮಿತ್ರಾ ನಿಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More