ಕಾರ್ಕಳ

ಕಾರ್ಕಳ: ಬಸ್‌ಗೆ ಸ್ಕೂಟಿ ಡಿಕ್ಕಿ- ಗಾಯ

ಕಾರ್ಕಳ: ಮಾಳಾ ಪೇರಡ್ಕ ಬಳಿ ಬಜಗೋಳಿ ಶೃಂಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ಗೆ ಸ್ಕೂಟಿಯೊಂದು ಡಿಕ್ಕಿಯಾದ ಘಟನೆ ಸೆ. 11ರಂದು ವರದಿಯಾಗಿದೆ.

ಚಿಕ್ಕಮಗಳೂರಿನ ಕಿರಣ್ ಡಿಕುನ್ಹ (42)ರವರು ತನ್ನ ದ್ವಿಚಕ್ರ ವಾಹನದಲ್ಲಿ ಕಾರ್ಕಳದಿಂದ ಕೊಪ್ಪ ಕಡೆಗೆ ಬಜಗೋಳಿ ಮಾರ್ಗವಾಗಿ ಹೋಗುತ್ತಿರುವಾಗ ಬಜಗೋಳಿಯಿಂದ ಶೃಂಗೇರಿ ಕಡೆಗೆ ಹೋಗುತ್ತಿದ್ದ ಬಸ್ಸಿನ ಚಾಲಕ ಮಹಮದ್ ಅಜ್ವೀರ್ ಬಸ್ಸನ್ನು ವೇಗವಾಗಿ ಚಲಾಯಿಸಿಕೊಂಡು ಯಾವುದೇ ಸೂಚನೆಯನ್ನು ನೀಡದೆ ಒಮ್ಮೆಲೆ ಬ್ರೇಕ್ ಹಾಕಿ ನಿಲ್ಲಿಸಿದ ಪರಿಣಾಮ ಸ್ಕೂಟಿಯು ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಲೀಯೋ ಡಿಸೊಜಾ (54) ಗಾಯಗೊಂಡು ಚಿಕಿತ್ಸೆಗಾಗಿ ಕಾರ್ಕಳದ ಆಸ್ಪತ್ರೆಗೆ ದಾಖಲಾಗಿರುತ್ತಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಬೇಳಂಜೆ ದೂಪದಕಟ್ಟೆ ಶಾಲೆಗೆ ನೋಟ್ ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ಕೊಡುಗೆ

Madhyama Bimba

ಕ್ರಿಯೇಟಿವ್ ಕಾಲೇಜು ಕಾರ್ಕಳದಲ್ಲಿ ಮಾದಕ ವಸ್ತು ವಿರೋಧಿ ದಿನ ಹಾಗೂ ನಶಾ ಮುಕ್ತ ಭಾರತ ಅಭಿಯಾನ

Madhyama Bimba

ಬಿ.ಐ.ಇ.ಆರ್.ಟಿ (ವಿಶೇಷ ಶಿಕ್ಷಕರ) ಹುದ್ದೆ : ಅರ್ಜಿ ಆಹ್ವಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More