ನೀರೆಬೈಲೂರು ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆಯು ಬಿಇಯಂ ಶಾಲೆಯಲ್ಲಿ ಸೆ. 12ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಭಾಸ್ಕರ್ ಶೆಟ್ಟಿ ವಹಿಸಿದ್ದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಸುಬ್ರಹ್ಮಣ್ಯ ಪ್ರಭು ಹಾಗೂ ಅತಿಥಿ ಶಿಕ್ಷಕರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಲಯನ್ 1ರ ವಲಯಾಧ್ಯಕ್ಷರಾದ ಪ್ರಶಾಂತ್ ಕುಮಾರ್ ಶೆಟ್ಟಿ, ಲಯನ್ಸ್ ಕ್ಲಬ್ ನೀರೆ ಬೈಲೂರು ಕಾರ್ಯದರ್ಶಿ ನೆಲ್ಸನ್ ಮಚಾದೋ, ಕೋಶಾಧಿಕಾರಿ ರಾಜೇಶ್ ಶೆಟ್ಟಿ, ನಿಕಟಪೂರ್ವ ವಲಯಾಧ್ಯಕ್ಷರಾದ ಗುರುಪ್ರಸಾದ್ ಶೆಟ್ಟಿ, ಸದಸ್ಯರಾದ ಸತೀಶ್ ಶೆಟ್ಟಿ ಸಂಭ್ರಮ, ಉದಯ ಕುಮಾರ್ ಹೆಗ್ಡೆ, ಸುರೇಶ್ ಶೆಟ್ಟಿ ಸಾಯಿರಾಮ್, ಜತ್ತನ್ನ ಎಜುಕೇಶನ್ ಟ್ರಸ್ಟ್‌ನ ಗೌರವಾಧ್ಯಕ್ಷರಾದ ಪ್ರೇಮಾಲತಾ ಜತ್ತನ್ನ, ಕಾರ್ಯದರ್ಶಿ ಸುಜಯ್ ಜತ್ತನ್ನ ಉಪಸ್ಥಿತರಿದ್ದರು.
ಸುಜಯ ಜತ್ತನ್ನ ಕಾರ್ಯಕ್ರಮ ನಿರೂಪಿಸಿದರು. ಉದಯ ಕುಮಾರ್ ಹೆಗ್ಡೆ ಸ್ವಾಗತಿಸಿ, ನೆಲ್ಸನ್ ಮಚಾದೋ ವಂದಿಸಿದರು.
