ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ಬಂಧನ ಶಾಸಕ ಹಾಗೂ ಮಾಜಿ ಸಚಿವರಾದ ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತ ಪ್ರಸಾದ್ ಶೆಟ್ಟಿ ಎಂಬವರನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಪ್ರಸಾದ್ಶಾ ಶೆಟ್ಟಿಯವರು ಶಾಸಕರಿಗೆ ಜೀವ ಬೆದರಿಕೆ ಒಡ್ಡುವ ರೀತಿಯಲ್ಲಿ ಹಾಗೂ ‘ತಲೆ ಬೇಕು’ ಎಂಬ ಅರ್ಥ ಬರುವಂತೆ ಪೋಸ್ಟ್ ಮಾಡಿದ್ದರು. ಈ . ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಈ ಸಂಬಂಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
