ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ ಜನ್ಮಭೂಮಿ ಸೇವಾ ಟ್ರಸ್ಟ್ , ಬೈಲೂರು ಇದರ ಅಂಗ ಸಂಸ್ಥೆಯಾದ ನಚಿಕೇತ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮದಂದು ನಚಿಕೇತ ಸಂಸ್ಥೆಯ ಪುಟಾಣಿ ಮಕ್ಕಳಿಗೆ ಮುದ್ದು ಕೃಷ್ಣ ಹಾಗೂ ಮುದ್ದು ರಾಧೆ ಸ್ಪರ್ಧೆ ಜರಗಿತು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಪುಟಾಣಿಗಳು ಹಾಗೂ ಶಿಕ್ಷಕ ವೃಂದದವರು ಮುಖ್ಯಸ್ಥರೊಂದಿಗೆ ಸಂಭ್ರಮದಿಂದ ಭಾಗವಹಿಸಿ ಸ್ಪರ್ಧೆಯನ್ನು ಯಶಸ್ವಿಗೊಳಿಸಿದರು. ನಂತರ ಜರುಗಿದ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ನಚಿಕೇತ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ನಾಯಕ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಾಜಿ ರೋಟರಿ ಜಿಲ್ಲಾ ಗವರ್ನರ್ ರೊ. ಡಾ. ಭರತೇಶ ಆದಿರಾಜ್, ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಅಧ್ಯಕ್ಷರಾದ ರೊ. ಮಂಜುನಾಥ ಹೆಗ್ಡೆ, ಮುಖ್ಯೋಪಾಧ್ಯಾಯನಿ ಮಾತಾಜಿ ಚಂದ್ರಿಕಾ ದಿವಾಕರ್ ಭಾಗವಹಿಸಿದ್ದರು.
ವೇದಿಕೆಯಲ್ಲಿ ರೊ. ಚಿರಾಗ್ ರಾವ್, ರೊ.ಬಾಲಕೃಷ್ಣ ನಾಯಕ್, ಆಡಳಿತ ಮಂಡಳಿ ಕೋಶಾಧಿಕಾರಿ ಮಂಜುನಾಥ, ಸಂಸ್ಥೆಯ ಶಿಕ್ಷಕ ಮತ್ತು ರಕ್ಷಕರ ಸಂಘದ ಅಧ್ಯಕ್ಷ ಜಗದೀಶ್ ಪೂಜಾರಿ, ಮಾತೃ ಮಂಡಳಿ ಅಧ್ಯಕ್ಷೆ ಶ್ರೀಮತಿ ಪ್ರಮೋದ ಉಪಸ್ಥಿತರಿದ್ದರು.
