ಬಜಗೋಳಿ: ಕಾರ್ಕಳ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಬಜಗೋಳಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೂರು ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
14 ವರ್ಷದೊಳಗಿನ ಬಾಲಕರ ವಿಭಾಗ, 14 ವರ್ಷದೊಳಗಿನ ಬಾಲಕಿಯರ ವಿಭಾಗ ಹಾಗೂ 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಉಡುಪಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ ಈ ಸಂದರ್ಭದಲ್ಲಿದ್ದರು.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
